ಇಂದಿನಿಂದ 22 ರವರೆಗೆ ಎಸ್ಸೆಸ್ಸೆಲ್ಸಿ-2 ಪರೀಕ್ಷೆ : ಕೇಂದ್ರಗಳ ಸುತ್ತ ನಿಷೇದಾಜ್ಞೆ

ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಜಿಲ್ಲೆಯ 20 ಕೇಂದ್ರಗಳಲ್ಲಿ ಇಂದಿನಿಂದ ಇದೇ ದಿನಾಂಕ 22 ರವರೆಗೆ ನಡೆಯಲಿದ್ದು, ಸುಗಮ ಪರೀಕ್ಷೆಗಾಗಿ 144 ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ. ವೆಂಕಟೇಶ್ ಎಂ.ವಿ. ಆದೇಶಿಸಿದ್ದಾರೆ. 

ಜಿಲ್ಲೆಯ ಚನ್ನಗಿರಿ – 5, ದಾವಣಗೆರೆ ಉತ್ತರ – 3, ದಕ್ಷಿಣ – 3, ಹರಿಹರ – 4, ಹೊನ್ನಾಳಿ – 2, ಜಗಳೂರು – 3 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿ, ಇಂಟರ್‍ನೆಟ್ ಸೆಂಟರ್‍ಗಳನ್ನು ಪರೀಕ್ಷಾ ದಿನದಂದು ಮುಚ್ಚಲು ಆದೇಶಿಸಲಾಗಿದೆ.

error: Content is protected !!