ಎಸ್.ಎಸ್. ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ಎಸ್.ಎಸ್. ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ದಾವಣಗೆರೆ, ಜೂ. 16- ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಯೂ ಆಗಿರುವ ಹಿರಿಯ ಶಾಸಕ  ಶಾಮನೂರು ಶಿವಶಂಕರಪ್ಪ ಅವರ 94ನೇ ಜನ್ಮ ದಿನ ಹಾಗೂ ಜಾಗತಿಕ ರಕ್ತದಾನಿಗಳ ದಿನದ ಅಂಗವಾಗಿ ಎಸ್ಸೆಸ್ ವೈದ್ಯಕೀಯ ಕಾಲೇಜು ಹಾಗು ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಯಾಗಿ ಶಾಮನೂರು ಶಿವಶಂಕರಪ್ಪ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲ ಡಾ. ಬಿ.ಎಸ್ ಪ್ರಸಾದ್ ಮಾತನಾಡಿ, ಒಬ್ಬರ ಜೀವ ಉಳಿಸಲು ಇಂದು ವೈದ್ಯರೇ ಆಗಬೇಕಿಲ್ಲ ರಕ್ತದಾನ ಮಾಡಿದರೂ ಸಾಕು, ಅದರಿಂದ ಜೀವ ಉಳಿಸಬಹುದು ಎಂದು ಹೇಳಿದರು. 

ಉಪ ಪ್ರಾಂಶುಪಾಲರಾದ ಡಾ. ಶಶಿಕಲಾ ಕೃಷ್ಣಮೂರ್ತಿ ಅವರು ರಕ್ತ ದಾನದಿಂದ ಆಗುವ ಲಾಭಗಳನ್ನು ವಿವರಿಸಿದರು. 

ಕಾರ್ಯಕ್ರಮದಲ್ಲಿ ಬಾಪೂಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾ ಶ್ರೀಮತಿ ಕಿರುವಾಡಿ ಗಿರಿಜಮ್ಮ ಮೆಡಿಕಲ್ ಡೈರೆಕ್ಟರ್ ಡಾ. ಅರುಣಕುಮಾರ ಅಜ್ಜಪ್ಪ, ಸಂಸ್ಥೆಯ ಆಡಳಿತ ವ್ಯವಸ್ಥಾಪಕ ರವಿ, ಸಂಸ್ಥೆಯ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. 

ಎಲ್ಲಾ ರಕ್ತ ದಾನಿಗಳಿಗೆ ಅಭಿನಂದನಾ ಪತ್ರ ವಿತರಿಸಲಾಯಿತು. 

error: Content is protected !!