ಹರಿಹರ ತಾಲ್ಲೂಕು ಬನ್ನಿಕೋಡು ಗ್ರಾಮದಲ್ಲಿ ದಾವಣಗೆರೆ ಡಿಆರ್ಎಂ ಕಾಲೇಜು ಹಾಗೂ ಬನ್ನಿಕೋಡು ಗ್ರಾಮಸ್ಥರ ಸಹಯೋಗದಲ್ಲಿ ಹಮ್ಮಿಕೊಂಡಿರುವ 2023-24 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಇಂದು ಬೆಳಿಗ್ಗೆ 9.15ಕ್ಕೆ ಜ.ಜ.ಮು. ವೈದ್ಯಕೀಯ ಮಹಾವಿದ್ಯಾಲಯದಿಂದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಲಿದೆ.
ಸಂಜೆ 6 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಧ.ರಾ.ಮ. ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಶಿವಪ್ಪ ಮಳ್ಳೂರ ಅವರಿಂದ ವಚನ ಸಾಹಿತ್ಯದಲ್ಲಿ ಕಾಯಕ ಮತ್ತು ದಾಸೋಹ ಹಾಗೂ ಮಾ.ಸ.ಬ. ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಆರ್. ರಾಘವೇಂದ್ರ ಅವರಿಂದ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಯುವ ಜನತೆಯ ಪಾತ್ರ ವಿಷಯವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಸದಸ್ಯರಾದ ರೇಣುಕಮ್ಮ ಬೀರಪ್ಪ, ಪವಿತ್ರ ಅನಿಲ್ಕುಮಾರ್ ಎನ್.ಕೆ. ಪ್ರಕಾಶ್, ವೈ. ಶಂಕರ್ ಮತ್ತಿತರರು ಭಾಗವಹಿಸಲಿದ್ದಾರೆ.