ನಗರದಲ್ಲಿ ನಾಳೆ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ, ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆ

ದಾವಣಗೆರೆ, ಜೂ. 19 – ನಾಡಿದ್ದು ದಿನಾಂಕ 21 ರಂದು ಬೆಳಿಗ್ಗೆ 5.30ಕ್ಕೆ ನಗರದ ಹೈಸ್ಕೂಲ್ ಮೈದಾನದಲ್ಲಿ ಸ್ವಂತ ಸಮಾಜಕ್ಕಾಗಿ ಯೋಗ ಎಂಬ ಘೋಷ ವಾಕ್ಯದೊಂದಿಗೆ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಾನಗರಪಾಲಿಕೆ, ಜಿಲ್ಲಾ ಯೋಗ ಒಕ್ಕೂಟ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾ ಪೆೊಲೀಸ್ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ತಪೋವನ ಆಯುರ್ವೇದ, ಯೋಗ ಮತ್ತು ನ್ಯಾಚುರೋಪತಿ ಮೆಡಿಕಲ್ ಕಾಲೇಜ್, ಆಶ್ವಿನಿ ಆಯುರ್ವೇದ ಮೆಡಿಕಲ್ ಕಾಲೇಜ್, ಎನ್.ಸಿ.ಸಿ., ಎನ್.ಎಸ್.ಎಸ್. ಘಟಕ, ಪ್ರಜಾಪಿತ ಬ್ರಹ್ಮಾಕುಮಾರೀಸ್, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಪತಂಜಲಿ ಯೋಗ ಸಮಿತಿ ಇವರುಗಳ ಸಹಕಾರದೊಂದಿಗೆ  ಕಾರ್ಯಕ್ರಮ ಆಯೋಜಿಸಲಾಗಿದೆ. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಶಾಂತನಗೌಡ ಡಿ.ಜಿ, ಬಿ.ಪಿ. ಹರೀಶ್,  ಕೆ.ಎಸ್‌. ಬಸವಂತಪ್ಪ, ಬಸವರಾಜು ವಿ. ಶಿವಗಂಗಾ, ಬಿ. ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಎಂ.ಗೌಡ. ಚಿದಾನಂದ, ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್, ಎಸ್.ಎಲ್. ಭೋಜೇಗೌಡ, ಡಿ.ಎಸ್ ಅರುಣ್, ಕೆ. ಅಬ್ದುಲ್ ಜಬ್ಬಾರ್, ಡಾ. ಧನಂಜಯ ಸರ್ಜಿ, ಪಾಲಿಕೆ ಮೇಯರ್ ವಿನಾಯಕ. ಬಿ.ಹೆಚ್, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಬಿ. ಸುರೇಶ್ ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾಪ್ರಶಾಂತ್ ಭಾಗವಹಿಸುವರೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ.ಯು. ಯೋಗೇಂದ್ರಕುಮಾರ್ ತಿಳಿಸಿದ್ದಾರೆ.

error: Content is protected !!