ದಾವಣಗೆರೆ, ಜೂ.19- ನಗರದ ನಿಜಲಿಂಗಪ್ಪ ಬಡಾವ ಣೆಯ ರಿಂಗ್ ರಸ್ತೆಯ ಕ್ಲಾಕ್ ಟವರ್ ಬಳಿ ಬುಧವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಶ್ರೀರಾಮ ಸೇನೆಯ ಮುಖಂಡ ಮಣಿ ಸರ್ಕಾರ್ ತೀವ್ರ ಗಾಯ ಗೊಂಡಿದ್ದಾರೆ. ಅತಿಯಾದ ವೇಗದಿಂದ ಬಂದ ಕಾರು, ನಿಯಂತ್ರಣ ಕಳೆದುಕೊಂಡು ಬೈಕ್ ಹಾಗೂ ಸರ್ಕಲ್ ನ ಕಟ್ಟೆಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮಣಿ ಸರ್ಕಾರ್ ಅವರನ್ನು ನಗರದ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ಹಾಗೂ ಬೈಕ್ ಸವಾರ ಹಾಲೇಶ್ ಅವ ರನ್ನು ಸಿ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿ ಸರ್ಕಾರ್ ಅವರ ಎರಡೂ ಕಾಲುಗಳಿಗೆ ಗಂಭೀರವಾದ ಪೆಟ್ಟಾಗಿದೆ. ಅಪಘಾತದ ದೃಶ್ಯಾ ವಳಿಗಳು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರ ಬಿಡಿಭಾಗಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಬೈಕ್ ಕೂಡಾ ಸಂಪೂರ್ಣ ಜಖಂಗೊಂಡಿದೆ.
January 10, 2025