ಅಕ್ಕಮಹಾದೇವಿ ಸಮಾಜದಲ್ಲಿ ಇಂದು ಹುಣ್ಣಿಮೆ ಕಾರ್ಯಕ್ರಮ, ಪುರಸ್ಕಾರ

ಶ್ರೀ ಅಕ್ಕಮಹಾದೇವಿ ಸಮಾಜದಲ್ಲಿ  ಹುಣ್ಣಿಮೆ ಕಾರ್ಯಕ್ರಮದ ಅಂಗವಾಗಿ ಸಮಾಜದ ಸಹಾಯ ನಿಧಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಇಂದು  ಏರ್ಪಡಿಸಲಾಗಿದೆ. 

ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಇಂದು ಸಂಜೆ 5 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷರಾದ ಶ್ರೀಮತಿ ಕೆ.ಕೆ. ಸುಶೀಲಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನೂತನ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್  ಅವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ವಾಸಂತಿ ಉಪ್ಪಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಮಾಜದ  ಉಪಾಧ್ಯಕ್ಷರಾದ ಶ್ರೀಮತಿ ನೀಲಗುಂದ ಜಯಮ್ಮ ಅವರು ಚಿಂತನ-ಮಂಥನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ  ಎಂದು ಕಾರ್ಯದರ್ಶಿ ಸುವರ್ಣಮ್ಮ ದೊಗ್ಗಳ್ಳಿ ತಿಳಿಸಿದ್ದಾರೆ. 

error: Content is protected !!