ಜಗಳೂರು : ತೈಲ ಬೆಲೆ ಏರಿಕೆಗೆ ಬಿಜೆಪಿ ಖಂಡನೆ

ಜಗಳೂರು : ತೈಲ ಬೆಲೆ ಏರಿಕೆಗೆ ಬಿಜೆಪಿ ಖಂಡನೆ

ಜಗಳೂರು, ಜೂ 22- ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವತಿಯಿಂದ ಎತ್ತಿನಬಂಡಿಯಲ್ಲಿ ಬೈಕ್ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಮಹಾತ್ಮಗಾಂಧಿ ವೃತ್ತದಿಂದ ಹೊರಟ ಪ್ರತಿಭಟನಾಕಾರರು, ಹೊಸ ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿವರೆಗೂ ಎತ್ತಿನಬಂಡಿ ಮೂಲಕ  ಮೆರವಣಿಗೆ ನಡೆಸಿ ತಹಶೀಲ್ದಾರ್ ಸಯ್ಯದ್ ಕಲೀಂ ಉಲ್ಲಾ ಅವರ ಮುಖಾಂತರ ರಾಜ್ಯಪಾಲರಿಗೆ ಲಿಖಿತ ಮನವಿ ಸಲ್ಲಿಸಿದರು.

ಇದೇ ವೇಳೆ ಬಹಿರಂಗ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕ ಎಚ್.ಪಿ.ರಾಜೇಶ್, ಆಡಳಿತಾರೂಢ ರಾಜ್ಯ ಸರಕಾರ ಪೆಟ್ರೋಲ್ ಪ್ರತಿ ಲೀಟರ್‌ಗೆ 3.7 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 3.9 ರಷ್ಟು ಬೆಲೆ ಏರಿಕೆಯನ್ನು ಏಕ ಪಕ್ಷೀಯ ನಿರ್ಧಾರ ಕೈಗೊಂಡಿರುವುದು ಜನಸಾಮಾನ್ಯರಿಗೆ ತೀವ್ರತೊಂದರೆ ಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೆ ಆರ್ಥಿಕ ಸಂಪನ್ಮೂಲ ದಲ್ಲಿ ಇಳಿಮುಖ ಅನುಭವಿಸುತ್ತಿದೆ. ಸರ್ಕಾರಿ ಆಸ್ತಿ ನೊಂದಣಿ ಶುಲ್ಕ, ಬಿತ್ತನೆ ಬೀಜ ದರ, ಅಗತ್ಯ ವಸ್ತುಗಳ ಹಾಗೂ ತೈಲ ಬೆಲೆ ಏರಿಕೆಯೊಂದಿಗೆ ಜನ ಸಾಮಾನ್ಯರ ಬದುಕಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ದಿ ಕಾಮಗಾರಿಗಳು ಮರೀಚಿಕೆಯಾಗುತ್ತಿವೆ. ಕೂಡಲೇ ತೈಲ ಬೆಲೆ ಇಳಿಕೆ ಮಾಡಬೇಕು ಇಲ್ಲವಾದರೆ ಬಿಜೆಪಿ ನೇತೃತ್ವದಲ್ಲಿ  ಉಗ್ರ ಹೋರಾಟ ನಡೆಸಲಾಗುವುದು ಎಂದು ರಾಜೇಶ್ ಎಚ್ಚರಿಸಿದರು.

ಮಾಜಿ ಶಾಸಕ ಎಸ್.ವಿ.ರಾಮಚಂದ್ರ, ಮಾತನಾಡಿ, ನಾನು ಬಿಜೆಪಿ ಆಡಳಿತಾವಧಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷನಾಗಿ ಕಳಂಕರಹಿತ ಆಡಳಿತ ನಡೆಸಿ ಜನಸಾಮಾನ್ಯರಿಗೆ ನಿಗಮದ ಸೌಲಭ್ಯಗಳನ್ನು ನೀಡಿದೆ ಎಂದರು.

ಕಾಂಗ್ರೆಸ್ ನೇತೃತ್ವದ ಆಡಳಿತ ಪಕ್ಷದ  ಸರಕಾರ ಆಡಳಿತಕ್ಕೆ ಬಂದು ಒಂದೇ ವರ್ಷದಲ್ಲಿ ವಾಲ್ಮೀಕಿ ನಿಗಮ ಮಂಡಳಿಯಲ್ಲಿ 187 ಕೋಟಿ ರೂ. ಭ್ರಷ್ಟಾಚಾರ ನಡೆಸಿದೆ. ನೈತಿಕ ಹೊಣೆ ಒತ್ತು  ಕೂಡಲೇ  ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ.ಮಹೇಶ್, ಜಿ.ಪಂ ಸದಸ್ಯ ಎಸ್.ಕೆ.ಮಂಜುನಾಥ್, ಮುಖಂಡರಾದ ಗಡಿಮಾಕುಂಟೆ ಸಿದ್ದೇಶ್, ಜೆ.ವಿ.ನಾಗರಾಜ್, ಬಿಸ್ತುವಳ್ಳಿ ಬಾಬು, ಬಿದರಕೆರೆ ರವಿಕುಮಾರ್, ಕೆಂಚನಗೌಡ, ಮರುಳಾರಾಧ್ಯ, ಕುಬೇರಪ್ಪ, ಪೂಜಾರ್ ಸಿದ್ದಪ್ಪ, ವಕೀಲ ಹನುಮಂತಪ್ಪ, ಬಾಲರಾಜ್, ಪ.ಪಂ‌.ಸದಸ್ಯರಾದ ಆರ್ .ತಿಪ್ಪೇಸ್ವಾಮಿ, ಪಾಪಲಿಂಗಪ್ಪ, ರೇವಣ್ಣ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

error: Content is protected !!