ದಾವಣಗೆರೆ – ಹರಿಹರ ಅರ್ಬನ್ ಸಹಕಾರ ಸಮುದಾಯ ಭವನದಲ್ಲಿ `ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು -ತುರ್ತು ಪರಿಸ್ಥಿತಿ ಸಂವಿಧಾನಕ್ಕೆ ಮಾಡಿದ ಅಪಚಾರ’ ಎಂಬ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಎಸ್ಪಿ ರವಿ ನಾರಾಯಣ್ ಅಧ್ಯಕ್ಷತೆ ವಹಿಸಲಿದ್ದು, ಅತಿಥಿಗಳಾಗಿ ಹುಬ್ಳಳ್ಳಿ – ಧಾರವಾಡ (ಪಶ್ಚಿಮ) ಶಾಸಕ ಅರವಿಂದ ಬೆಲ್ಲದ್, ಕೋಲಾರ ಮಾಜಿ ಸಂಸದ ಎಸ್. ಮುನಿಸ್ವಾಮಿ, ಹೈಕೋರ್ಟ್ ವಕೀಲ ವಿವೇಕ್ ರೆಡ್ಡಿ, ದಾವಣಗೆರೆ-ಹರಿಹರ ಅರ್ಬನ್ ಸಹಕಾರ ಸಮುದಾಯ ಭವನದ ಅಧ್ಯಕ್ಷ ಮುರುಗೇಶ್ ಆರಾಧ್ಯ ಉಪಸ್ಥಿತರಿರುವರು.