ನಗರದಲ್ಲಿ ಇಂದು ಶಿವಾನುಭವ ಸಂಪದ

ಶ್ರೀ ಅನ್ನದಾನೀಶ್ವರ ಶಾಖಾಮಠದಲ್ಲಿ ಇಂದು ಸಂಜೆ 6.30 ಕ್ಕೆ 270 ನೇ ಶಿವಾನುಭವ ಸಂಪದ ಹಾಗೂ ಪರಿಸರ ದಿನಾಚರಣೆ ನಡೆಯಲಿದೆ.

ಹಾಲಕೆರೆ ಸಂಸ್ಥಾನ ಮಠದ ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶ್ರೀ ಅನ್ನದಾನೇಶ್ವರ ಸಾರ್ವಜನಿಕ ಸೇವಾ ಟ್ರಸ್ಟ್ ಅಧ್ಯಕ್ಷ ಡಾ. ಅಥಣಿ ಎಸ್. ವೀರಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ದಾವಣಗೆರೆ ವಿವಿ ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಿದ್ಧಪ್ಪ ಬಿ. ಕಕ್ಕಳಮೇಲಿ ಉಪನ್ಯಾಸ ನೀಡಲಿದ್ದಾರೆ. ಹರಿಹರ ನಗರಸಭೆ ಪೌರಾಯುಕ್ತ ಬಸವರಾಜ ಐಗೂರು ಅತಿಥಿಯಾಗಿ ಭಾಗವಹಿಸಲಿದ್ದಾರೆ. 

error: Content is protected !!