ದಾವಣಗೆರೆ, ಜೂ. 27- ಶ್ರೀ ಗಂಗಾಪರಮೇಶ್ವರಿ ಜಯಂತ್ಯುತ್ಸವ ಸಮಿತಿ ವತಿಯಿಂದ ನಾಳೆ ದಿನಾಂಕ 28 ರ ಶುಕ್ರವಾರ ಬೆಳಿಗ್ಗೆ 10.30 ಕ್ಕೆ ನಗರದ ನಿಮಿಷಾಂಬ ಕಲ್ಯಾಣ ಮಂಟಪದಲ್ಲಿ ಶ್ರೀ ಗಂಗಾಪರಮೇಶ್ವರಿ ಜಯಂತ್ಯುತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ನಿಂಗರಾಜ್ ಹಾವನೂರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಗಂಗಾಮತ ಸಮಾಜದ ಜಿಲ್ಲಾಧ್ಯಕ್ಷ ಮಾಗಾನಹಳ್ಳಿ ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಪದಾಧಿಕಾರಿಗಳಾದ ಪಿ.ಗಂಗಾಧರಪ್ಪ, ಎಸ್. ಚಂದ್ರಪ್ಪ, ಸುರೇಶ್, ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.