ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ: ಎಸ್ಸೆಸ್

ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ: ಎಸ್ಸೆಸ್

ದಾವಣಗೆರೆ, ಜೂ.27- ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಈ ಕುರಿತು ಹೈಕಮಾಂಡ್‌ ಕೈಗೊಳ್ಳುವ ತೀರ್ಮಾನವೇ ಅಂತಿಮ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರೋಧ ಪಕ್ಷಗಳನ್ನು ಸಮರ್ಥ ವಾಗಿ ಎದುರಿಸುತ್ತಿದ್ದಾರೆ. ಮಠಾಧೀಶರು ಹೇಳಿದಾಕ್ಷಣ ಮುಖ್ಯಮಂತ್ರಿ ಬದಲಾವಣೆಯಾಗದು ಎಂದರು.

ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ ಯಾರದೋ ಮಾತು ಕೇಳಿ ಹೇಳಿಕೆ ನೀಡಿದ್ದಾರೆ. ಯಾರು ಏನೇ ಹೇಳಿದರೂ ನಡೆಯುವುದಿಲ್ಲ. ಜಾತಿವಾರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ ನಾನು ತಟಸ್ಥ. ಹೈಕಮಾಂಡ್‌ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

error: Content is protected !!