ಕೆಂಪೇಗೌಡರ ಆದರ್ಶ ಯುವ ಪೀಳಿಗೆಗೆ ಮಾದರಿ

ಕೆಂಪೇಗೌಡರ ಆದರ್ಶ ಯುವ ಪೀಳಿಗೆಗೆ ಮಾದರಿ

ಜಗಳೂರಿನ ಕಾರ್ಯಕ್ರಮದಲ್ಲಿ ಶಾಸಕ ಬಿ.ದೇವೇಂದ್ರಪ್ಪ

ಜಗಳೂರು, ಜೂ. 28- ಜಾತ್ಯತೀತವಾಗಿ ಎಲ್ಲಾ ವರ್ಗದವರ ಏಳ್ಗೆಯ ದೂರದೃಷ್ಟಿಯಿಂದ ಬೆಂಗಳೂರು ನಗರ ನಿರ್ಮಿಸಿದ  ಕೆಂಪೇಗೌಡ ಅವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಮಾದರಿ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ಪಟ್ಟಣದ ಗುರುಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರ್ಕಾರದಿಂದ ಮಹನೀಯರ ಜಯಂತಿಗ ಳನ್ನು ಆಚರಣೆ ಮಾಡುತ್ತಿರುವುದು ಅವರ ಕೊಡು ಗೆಗಳನ್ನು  ಸ್ಮರಿಸಿಕೊಂಡು ಮಕ್ಕಳ ಜೀವನದಲ್ಲಿ ಪ್ರೇರ ಣೆಯಾಗುವ  ಸದುದ್ದೇಶದಿಂದ ಎಂದು ತಿಳಿಸಿದರು.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅವರ ಹೆಸರು ಇಟ್ಟಿರುವುದು ಸಂತಸದ ಸಂಗತಿ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ತಾಲ್ಲೂಕು ಕಚೇರಿಯಿಂದ ಅಂಬೇಡ್ಕರ್ ವೃತ್ತ, ಮಹಾತ್ಮಗಾಂಧಿ ವೃತ್ತದ ಮೂಲಕ ಡೊಳ್ಳು ಕುಣಿತ, ವಾದ್ಯ ವೃಂದದ ಮೂಲಕ ಶಾಲಾ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು.

ಸಮಾರಂಭದಲ್ಲಿ ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್,ಮುಖಂಡರಾದ ಪಲ್ಲಾಗಟ್ಟೆ ಶೇಖರಪ್ಪ, ಬಿ.ಮಹೇಶ್ವರಪ್ಪ, ತಹಶೀಲ್ದಾರ್ ಸಯೈಯ್ಯದ್ ಕಲೀಂ ವುಲ್ಲಾ, ಪ.ಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ, ತಾ.ಪಂ. ಪ್ರಭಾರಿ ಇಓ ಮಿಥುನ್ ಕಿಮಾವತ್, ಬಿಇಓ ಹಾಲಮೂರ್ತಿ, ಬಿಆರ್ ಸಿ  ಡಿ.ಡಿ. ಹಾಲಪ್ಪ, ಸಿ ಡಿಪಿಓ ಬೀರೇಂದ್ರಕುಮಾರ್ ಇದ್ದರು.

error: Content is protected !!