ಇಂದಿನಿಂದ ಮೇಲ್ವಿಚಾರಕರ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ, ಜೂ.28- ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆ ನೇಮಕ ಮಾಡಿಕೊಳ್ಳಲು ನಾಳೆ ದಿನಾಂಕ 29 ರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಹುದ್ದೆಗಳು : ರಾಜಗೊಂಡ ನಹಳ್ಳಿ, ಬೇತೂರು, ಕೊಂಡಜ್ಜಿ, ಹೆಬ್ಬಾಳು, ಕಬ್ಬಳ, ಉಕ್ಕಡಗಾತ್ರಿ, ಹಳೇಬಾತಿ, ಪಾಂಡೋ ಮಟ್ಟಿ, ಕಂದನಕೋವಿ, ಕಕ್ಕರಗೊಳ್ಳ, ಬನ್ನಿ ಕೋಡು, ವಡೆಯರ ಹತ್ತೂರು, ಓಬವ್ವನಾ ಯಕನಹಳ್ಳಿ (ನರಗನಹಳ್ಳಿ), ದೊಡ್ಡಬ್ಬಿಗೆರೆ, ಅಣಜಿ, ಗುಡಾಳು ಇಲ್ಲಿ ಖಾಲಿ ಇರುತ್ತವೆ. 

ಆಸಕ್ತ ಆಭ್ಯರ್ಥಿಗಳು ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ,  ನಂತರ  ಸ್ವೀಕೃತಿ ಪತ್ರದ ಪ್ರತಿಯೊಂದಿಗೆ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಪಂಚಾಯತ್ ಕಚೇರಿ ಆಡಳಿತ ವಿಭಾಗದ ಕೊಠಡಿ ಸಂ.25ಕ್ಕೆ ಜುಲೈ 20 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಖ್ಯೆ 08192-226655 ಗೆ ಕರೆ ಮಾಡಬಹುದು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.

error: Content is protected !!