ದಾವಣಗೆರೆ, ಜೂ. 30- ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು. ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಜುಲೈ 1ರ ಸೋಮವಾರ ಬೆಳಗ್ಗೆ 11.30ರಿಂದ ಸಂಜೆ 5ರವರೆಗೆ ಮಹಾನಗರ ಪಾಲಿಕೆ ಕಚೇರಿ ಬಳಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ವೇದಿಕೆ ಜಿಲ್ಲಾಧ್ಯಕ್ಷ ಎಂ.ಎಸ್.ರಾಮೇಗೌಡ ತಿಳಿಸಿದ್ದಾರೆ.
ಉಪವಾಸ ಸತ್ಯಾಗ್ರಹದಲ್ಲಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ತಿಳಿಸಿದ್ದಾರೆ. ಅಲ್ಲದೇ ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಲ್. ಹೆಚ್. ಅರುಣ್ ಕುಮಾರ್, ಕಸಾಪ ಮಾಜಿ ಅಧ್ಯಕ್ಷ ಕುರ್ಕಿ ಮಂಜುನಾಥ, ವಾದ್ಯಗೋಷ್ಠಿ ಕಲಾವಿದರ ಸಂಘದ ಅಧ್ಯಕ್ಷ ಪರಮೇಶ್, ಪೀಪಲ್ ಲಾಯರ್ಸ್ ಗಿಲ್ಡ್ ಅಧ್ಯಕ್ಷ ಅನೀಸ್ ಪಾಷಾ ಮತ್ತಿತರರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ರಾಮೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.