ದಾವಣಗೆರೆ, ಜೂ.30- ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್. ವೆಂಕಟೇಶ್ ಬಾಬು ಅವರಿಗೆ ಮೈಸೂರು ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ನೀಡಿದೆ.
ಮೈಸೂರು ವಿವಿ ಜೆಎಸ್ಎಸ್ ಸಂಶೋಧನಾ ಕೇಂದ್ರದ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಎಸ್. ಶಂಕ್ರಪ್ಪ ಅವರ ಮಾರ್ಗದರ್ಶನದಲ್ಲಿ `ಪರ್ಫಾರ್ಮೆನ್ಸ್ ಇವ್ಯಾಲ್ಯೂಯೇಷನ್ ಆಫ್ ಡಿಜಿಟಲ್ ಪ್ರಿಂಟಿಂಗ್ ಅಂಡ್ ಪಬ್ಲಿಸಿಂಗ್ ಇಂಡಸ್ಟ್ರಿ ಇನ್ ಇಂಡಿಯಾ’ ಎಂಬ ವಿಷಯದ ಕುರಿತು ಮಹಾ ಪ್ರಬಂಧವನ್ನು ಸಲ್ಲಿಸಿದ್ದರು. ಬಾಬು, ನಗರದ ದಿ. ಟಿ. ಶಿವಾನಂದ್ ಸೀತಿಮನಿ ಹಾಗೂ ಶಾಂತಮ್ಮ ದಂಪತಿ ಪುತ್ರ.