ಭದ್ರಾ ಮೇಲ್ದಂಡೆ ಚುರುಕಿಗೆ ಸೂಚನೆ

ಭದ್ರಾ ಮೇಲ್ದಂಡೆ ಚುರುಕಿಗೆ ಸೂಚನೆ

ದಾವಣಗೆರೆ, ಜು. 30 – ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯು ಮಂದಗತಿಯಲ್ಲಿ ಸಾಗುತ್ತಿ ರುವುದಕ್ಕೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇಂದು ತಮ್ಮ ಗೃಹ ಕಚೇರಿಯಲ್ಲಿ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಪ್ರಗತಿಯ ಮಾಹಿತಿ ಪಡೆದರು. ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಅಡಿ ಸಮರ್ಪಕ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸಂಸದರು ತಿಳಿಸಿದರು.

ಕಾಮಗಾರಿಗೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದರು ಅನುದಾನ ಲಭಿಸದಿದ್ದಲ್ಲಿ ನಮ್ಮ ಗಮನಕ್ಕೆ ತಂದರೆ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಶ್ವೇಶ್ವರಯ್ಯ ಜಲನಿಗಮದ ಅಧಿಕಾರಿ ವರ್ಗದವರು, ಇಂಜಿನಿಯರ್ ಗಳು ಉಪಸ್ಥಿತರಿದ್ದರು.

error: Content is protected !!