ಮಾದಕ ವ್ಯಸನದಿಂದ ಮಕ್ಕಳ ಭವಿಷ್ಯಕ್ಕೆ ಮಾರಕ

ಮಾದಕ ವ್ಯಸನದಿಂದ ಮಕ್ಕಳ  ಭವಿಷ್ಯಕ್ಕೆ ಮಾರಕ

ಜಗಳೂರು, ಜು. 1- ಮಾದಕ ವ್ಯಸನ ಮಕ್ಕಳ ಉಜ್ವಲ ಭವಿಷ್ಯಕ್ಕೆ ಮಾರಕ ಎಂದು ಪೊಲೀಸ್ ನಿರೀಕ್ಷಕ ಶ್ರೀನಿವಾಸ್ ರಾವ್ ಕಳವಳ ವ್ಯಕ್ತಪಡಿಸಿದರು.

ಪೊಲೀಸ್ ಇಲಾಖೆಯಿಂದ  ಹಮ್ಮಿಕೊಂಡಿದ್ದ ‘ಮಾದಕ ವ್ಯಸನದ ದುಷ್ಪರಿಣಾಮ’ ಕುರಿತು ಜಾಗೃತಿ ಜಾಥಾದಲ್ಲಿ ಭಾಗವಹಿಸಿ ನಂತರ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಪ್ರತಿಜ್ಞಾವಿಧಿ ಬೋದಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು.

ಮಾದಕ ವಸ್ತಗಳು ವ್ಯಕ್ತಿಯ ಆರೋಗ್ಯದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತವೆ. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಹಾಗೂ ಕುಟುಂಬದ ಸದಸ್ಯರಿಗೆ ಮಾದಕವಸ್ತು ಮತ್ತು ಮಾದಕ ದ್ರವ್ಯ ಸೇವನೆಯಿಂದ ದೂರವಿರಲು ಮನವರಿಕೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಮಾದಕ ವ್ಯಸನದಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಅಸಾಧ್ಯ. ಕೌಟುಂಬಿಕ ನೆಮ್ಮದಿ ಹಾಳಾಗುತ್ತದೆ. ಆದ್ದರಿಂದ ಯುವ ಸಮೂಹ ಜಾಗೃತರಾಗಬೇಕು ಪ್ರತಿಯೊಬ್ಬರೂ ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಪಿಎಸ್ ಐಗಳಾದ ಸಾಗರ್, ಮಂಜುನಾಥ್, ಆಶಾ, ಸಿಬ್ಬಂದಿಗಳಾದ ಶಶಿಧರ್, ರಮೇಶ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

error: Content is protected !!