ದಾವಣಗೆರೆ, ಜು.1-ಜಿಲ್ಲೆಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡವರು ಜುಲೈ 15ರೊಳಗೆ ದಂಡ ಪಾವತಿಸುವಂತೆ ಎಸ್ಪಿ ಉಮಾ ಪ್ರಶಾಂತ್ ಸೂಚಿಸಿದ್ದಾರೆ.
ಕಳೆದ 2023ರ ಜನವರಿ 1ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳ ಮೇಲೆ ಪೊಲೀಸ್ ಇಲಾಖೆಯಿಂದ ಸಂಚಾರಿ ಇ-ಚಲನ್ ಮೂಲಕ 1,15,447 ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ 1,11,958 ಪ್ರರಣಗಳು ಬಾಕಿ ಇವೆ.
ಬಾಕಿ ಉಳಿಸಿಕೊಂಡ ವಾಹನ ಮಾಲೀಕರು ಆದಷ್ಟು ಬೇಗ ಪ್ರಕರಣ ಇತ್ಯರ್ಥ ಮಾಡಿಕೊಳ್ಳಬೇಕು. ವಿಳಂಬ ಮಾಡಿದಲ್ಲಿ ವಾಹನದ ಮಾಲೀಕತ್ವ ಬದಲಾವಣೆ ಹಾಗೂ ಎಫ್ಸಿ ಮಾಡಿಸುವ ವೇಳೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಸ್ಪಿ ಎಚ್ಚರಿಸಿದ್ದಾರೆ.