ಉದ್ಯೋಗ ಮೀಸಲಾತಿಗಾಗಿ ಕರವೇ ಆಗ್ರಹ

ಉದ್ಯೋಗ ಮೀಸಲಾತಿಗಾಗಿ ಕರವೇ ಆಗ್ರಹ

ಕರ್ನಾಟಕ ರಕ್ಷಣಾ ವೇದಿಕೆಯಿಂದ ಪಾಲಿಕೆ ಮುಂಭಾಗ ಸಾಂಕೇತಿಕ ಉಪವಾಸ ಸತ್ಯಾಗ್ರಹ

ದಾವಣಗೆರೆ, ಜು. 1- ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸಮಗ್ರ ಕಾನೂನು ರೂಪಿಸಬೇಕು. ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡ ಬಣ) ಕಾರ್ಯಕರ್ತರು ವೇದಿಕೆ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ಅವರ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಮುಂಭಾಗ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸಿದರು.

ಇದೇ ವೇಳೆ ಮಾತನಾಡಿದ ರಾಮೇಗೌಡ ಅವರು, ಡಾ. ಸರೋಜನಿ ಮಹಿಷಿ ಜಾರಿಗೆ ತರಬೇ ಕೆಂದು ಹಲವಾರು ಹೋರಾಟಗಳನ್ನು ಮಾಡುವ ಮೂಲಕ ರಾಜ್ಯ ಸರ್ಕಾರದ ಗಮನ ಸೆಳೆದರೂ ಪ್ರಯೋಜನವಾಗಿಲ್ಲ. ಕರ್ನಾಟಕದ ಎಲ್ಲಾ ಬಗೆಯ ಉದ್ಯೋಗದಲ್ಲಿ ಕನ್ನಡಿಗರಿಗೆ ಸಿಂಹಪಾಲು ಇರಬೇಕೆಂಬುದು ಕರ್ನಾಟಕ ರಕ್ಷಣಾ ವೇದಿಕೆಯ ನ್ಯಾಯಯುತ ಬೇಡಿಕೆ. ಡಾ. ಸರೋಜನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಯಾಗದ ಹಿನ್ನೆಲೆಯಲ್ಲಿ ಕನ್ನಡದ ಯುವಜನರಿಗೆ ಉದ್ಯೋಗವಿಲ್ಲದಂತಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗು ತ್ತಿದೆ. ಕನ್ನಡಿಗರಿಗೆ ಸಿಗಬೇಕಾದ ಉದ್ಯೋಗಗಳನ್ನು ಕಸಿದುಕೊಳ್ಳುತ್ತಿದ್ದು, ಕನ್ನಡಿಗರು ತಮ್ಮ ನೆಲದಲ್ಲೇ ತಾವೇ ನಿರುದ್ಯೋಗಿಗಳಾಗುವ ದುಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕನ್ನಡ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ದಕ್ಕುವಂತಾಗಬೇಕು. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಬೇಕು. ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ  1946ರ ಅನ್ವಯ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು. ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ. 100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕೆಂದು ಆಗ್ರಹಿಸಿದರು.

ಎಲ್ಲಾ ಖಾಸಗಿ ಸಂಸ್ಥೆಗಳ ಇತರೆ ಹುದ್ದೆಗಳಲ್ಲಿ ಶೇ. 80 ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಹದಿನೈದು ವರ್ಷಗಳ ಕಾಲ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯ ವಾಗಿ ಕನ್ನಡ ಬರವಣಿಗೆ ಪರೀಕ್ಷೆ ನೀಡಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು. ರಾಜ್ಯ, ಕೇಂದ್ರ ಸರ್ಕಾರಗಳ ಇಲಾಖೆಗಳು, ಸಾರ್ವಜನಿಕ ವಲಯದ ಘಟಕ ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅವಕಾಶವನ್ನು ಉದ್ದೇಶಿತ ಕಾನೂನಿ ನಲ್ಲಿ ಅಳವಡಿಸಬೇಕು ಎಂದು ಒತ್ತಾಯಿಸಿದರು.

ಕರವೇ ಪದಾಧಿಕಾರಿಗಳಾದ  ಬಸಮ್ಮ, ಶಾಂತಮ್ಮ, ಮಂಜುಳಾ, ಧರ್ಮರಾಜ್, ಗೋಪಾಲ್ ದೇವರಮನಿ, ಪರಮೇಶ್, ಲೋಕೇಶ್, ಸುರೇಶ್, ತುಳಸಿರಾಮ್, ತನ್ವೀರ್, ದಾದಾಪೀರ್, ಗಿರೀಶ್, ಖಾದರ್ ಬಾಷಾ, ಆಟೋ ರಫೀಕ್, ಹರೀಶ್, ಅನ್ವರ್ ಸಾಬ್, ಹೊನ್ನಾಳಿ ವಿನಯ್, ಮಂಜು, ಬಾಷಾ ಮೊದಲಾದವರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

error: Content is protected !!