ದೈಹಿಕ ವ್ಯಾಯಾಮವಾಗುವ ಕ್ರೀಡೆಯಲ್ಲಿ ಆಸಕ್ತಿ ಇರಲಿ

ದೈಹಿಕ ವ್ಯಾಯಾಮವಾಗುವ ಕ್ರೀಡೆಯಲ್ಲಿ ಆಸಕ್ತಿ ಇರಲಿ

ಎಆರ್‌ಜಿ ಕಾಲೇಜಿನ ಕ್ರೀಡಾ ಉತ್ಸವದಲ್ಲಿ ಕಾಂಗ್ರೆಸ್‌ ಯುವ ಮುಖಂಡ ಶಿವರತನ್‌

ದಾವಣಗೆರೆ, ಜು.2- ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಬಹಳ ಮುಖ್ಯ. ಆದ್ದರಿಂದ ವಿದ್ಯಾರ್ಥಿಗಳು ಮೊಬೈಲ್‌ ಗೇಮ್‌ ಆಡುವುದ ಕ್ಕಿಂತ ದೈಹಿಕ ವ್ಯಾಯಾಮವಾಗುವ ಕ್ರೀಡೆಗಳಲ್ಲಿ ಹೆಚ್ಚಿನ ಆಸಕ್ತಿ ತೋರಬೇಕು ಎಂದು ಕಾಂಗ್ರೆಸ್‌ ಯುವ ಮುಖಂಡ ಶಿವರತನ್‌ ಹೇಳಿದರು.

ನಗರದ ಎ.ಆರ್.ಜಿ. ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಎ.ಆರ್‌.ಜಿ ವೈಭವ-2024ರ `ಕ್ರೀಡಾ ಉತ್ಸವ’ದಲ್ಲಿ ಬ್ಯಾಟ್‌ ಬೀಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅನೇಕ ಕ್ರೀಡಾ ಪಟುಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿ ಕೊಂಡಿದ್ದಾರೆ. ಈ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚು ಸಾಧನೆ ಮಾಡಿದ್ದಾರೆ. ಭಾರತೀಯ ಕ್ರಿಕೆಟ್‌ ತಂಡದ ಆಟಗಾರರಾಗಿ ದಾವಣಗೆರೆಯ ಆರ್‌.ವಿನಯ್‌ ಕುಮಾರ್‌ ಅವರು ನಮ್ಮ ಜಿಲ್ಲೆ ಮತ್ತು ರಾಜ್ಯವನ್ನು ಪ್ರತಿನಿಧಿಸಿರುವುದು ಹೆಮ್ಮೆಯ ಸಂಗತಿ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರು ಈ ಹಿಂದೆ ಕ್ರೀಡಾ ಸಚಿವರಾಗಿದ್ದಾಗ ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ಒದಗಿಸಿ ಕ್ರೀಡಾಂಗಣಗಳನ್ನು ಅಭಿವೃದ್ಧಿ ಪಡಿಸಿದ್ದಾರೆ. ಇವರೂ ಸಹ ಎ.ಆರ್‌.ಜಿ ಕಾಲೇಜಿನ ವಿದ್ಯಾರ್ಥಿಯಾಗಿದ್ದರು ಎಂದು ನೆನಪಿಸಿದರು.

ಈ ವೇಳೆ ಕಾಲೇಜಿನ ಪ್ರಾಚಾರ್ಯ ಡಾ.ಜಿ.ಬಿ. ಬೋರಯ್ಯ, ಕಾಲೇಜಿನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಈಶ್ವರ್, ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿದ್ದರು.

error: Content is protected !!