ಡೆಂಗ್ಯೂ ಹತೋಟಿಗೆ ಅವಶ್ಯ ಕ್ರಮ ಕೈಗೊಳ್ಳಿ

ಡೆಂಗ್ಯೂ ಹತೋಟಿಗೆ  ಅವಶ್ಯ ಕ್ರಮ ಕೈಗೊಳ್ಳಿ

ಹೊನ್ನಾಳಿ, ಜು.4- ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಮನು ಷ್ಯನ ಪ್ರಾಣಕ್ಕೆ ಹಾನಿಯುಂಟು ಮಾಡುವ ರೋಗಗಳಾ ಗಿದ್ದು, ಇವುಗಳ ನಿಯಂ ತ್ರಣಕ್ಕೆ ಅವಶ್ಯವಿರುವ ಮುಂಜಾಗ್ರತಾ ಕ್ರಮಗ ಳನ್ನು ತೆಗೆದುಕೊಳ್ಳಬೇಕೆಂದು ಉಪವಿಭಾ ಗಾಧಿಕಾರಿ ವಿ.ಅಭಿಷೇಕ್ ಸೂಚಿಸಿದರು.

ಡೆಂಗ್ಯೂ ನಿಯಂತ್ರಣದ ಬಗ್ಗೆ ತಾಲ್ಲೂಕು ಮಟ್ಟದ ಇಲಾಖಾ ಸಮನ್ವಯಾಧಿಕಾರಿಗಳ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲಾ ಇಲಾಖೆಗಳೂ ತಮ್ಮ ಜವಾಬ್ದಾರಿ ಯನ್ನು ಅರಿತು ಸಮನ್ವಯತೆಯಿಂದ ಕೆಲಸ ಮಾಡಿ, ಡೆಂಗ್ಯೂ ನಿಯಂತ್ರಣಕ್ಕೆ ಮುಂದಾಗುವಂತೆ ಅವರು ಕರೆ ನೀಡಿದರು.

ತಾ.ಪಂ ಇಲಾಖೆಯವರು ಎಲ್ಲಾ ಗ್ರಾಮಗಳಲ್ಲೂ ಗ್ರಾಮ ಸಭೆಗಳನ್ನು ನಡೆಸಿ, ಮುಂಜಾಗ್ರತಾ ಕ್ರಮಗಳ ಬಗ್ಗೆ ಗ್ರಾ.ಪಂ ಸದಸ್ಯರಿಗೆ ಮತ್ತು ಗ್ರಾಮಸ್ಥರಿಗೆ ಅರಿವು ಮೂಡಿಸಬೇಕು. ಕಸ ಸಂಗ್ರಹಣಾ ವಾಹನಗಳಲ್ಲಿ ಧ್ವನಿವರ್ಧಕಗಳನ್ನು ಬಳಸಿ ಪ್ರಚಾರ ಮಾಡಬೇಕೆಂದು ಸಲಹೆ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯವರು ಶಾಲೆಗಳಲ್ಲಿ ಮಕ್ಕಳಿಗೆ ಮಾಹಿತಿ ನೀಡಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ಅಂಗನವಾಡಿಗಳ ಸುತ್ತ-ಮುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳುವುದರ ಜೊತೆಗೆ ಮಕ್ಕಳು ಮಲಗುವ ವೇಳೆಯಲ್ಲಿ ಸೊಳ್ಳೆ ಪರದೆಗಳನ್ನು ಬಳಸಿ ಸೊಳ್ಳೆ ಕಚ್ಚದಂತೆ ನೋಡಿಕೊಳ್ಳಬೇಕು ಎಂದರು.

ಬಿಸಿಎಂ, ಸಮಾಜ ಕಲ್ಯಾಣ ಇಲಾಖೆಯವರು ಹಾಸ್ಟೆಲ್‍ಗಳ ಸುತ್ತ-ಮುತ್ತ ಮತ್ತು ಟೆರೆಸ್ ಮೇಲೆ ನೀರು ನಿಲ್ಲದಂತೆ ಸ್ವಚ್ಛತೆಗೆ ವಿಶೇಷ ಆದ್ಯತೆ ಕೊಡಬೇಕು ಹಾಗೂ ವಿದ್ಯಾರ್ಥಿಗಳಿಗೆ ಜ್ವರ ಬಂದರೆ ಅಥವಾ ರೋಗ ಲಕ್ಷಣಗಳು ಕಂಡು ಬಂದರೆ ರಕ್ತ ತಪಾಸಣೆಯನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದು ಅವರು ತಿಳಿಸಿದರು.

ಮೀನುಗಾರಿಕಾ ಇಲಾಖೆಯವರಿಗೂ ನೀರಿನ ತೊಟ್ಟಿಗಳಲ್ಲಿ ಮೀನು ಸಂಗ್ರಹಣಾ ತೊಟ್ಟಿಗಳನ್ನು ಹೆಚ್ಚು ನಿರ್ಮಾಣ ಮಾಡಿ, ಅದರಲ್ಲಿ ಗಪ್ಪಿ, ಗಾಂಬ್ಯುಸಿಯಾ ಮೀನುಗಳ ಸಂತಾನವನ್ನು ಹೆಚ್ಚಳ ಮಾಡಿಸಿದರೆ ಅವುಗಳು ಲಾರ್ವಾವನ್ನು ತಿನ್ನುತ್ತವೆ. ಇದರಿಂದ ಸೊಳ್ಳೆಗಳ ಉತ್ಪತ್ತಿಯಾಗುವುದು ಕಡಿಮೆಯಾಗಲಿವೆ. ಈ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು ಎಂದು ಮಾಹಿತಿ ನೀಡಿದರು.

ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಸತೀಶ್ ಮಾಳಗಿ ಮಾತನಾಡಿ, 2034ರ ಜನವರಿ ತಿಂಗಳಿಂದ ಇಲ್ಲಿಯವರೆಗೆ ಹೊನ್ನಾಳಿ – ನ್ಯಾಮತಿ ತಾಲ್ಲೂಕುಗಳ ಗ್ರಾಮೀಣ ಪ್ರದೇಶಗಳಿಂದ ಸುಮಾರು 44 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, 7 ಪ್ರಕರಣಗಳು ಹೊನ್ನಾಳಿ – ನ್ಯಾಮತಿ ಪಟ್ಟಣಗಳಲ್ಲಿ ಪತ್ತೆಯಾಗಿವೆ ಎಂದು ಸಭೆಯ ಗಮನಕ್ಕೆ ತಂದರು.

ಪುರಸಭಾ ಮುಖ್ಯಾಧಿಕಾರಿ ಲೀಲಾವತಿ, ಪಟ್ಟಣ ಪಂಚಾಯ್ತಿ ನ್ಯಾಮತಿಯ ಮುಖ್ಯಾಧಿಕಾರಿ ಗಣೇಶರಾವ್, ತಾ.ಪಂ ಇಒ ಹೆಚ್.ವಿ.ರಾಘವೇಂದ್ರ, ತಹಶೀಲ್ದಾರ್‍ಗಳಾದ ಪಟ್ಟರಾಜೇಗೌಡ, ಹೆಚ್.ಬಿ.ಗೋವಿಂದಪ್ಪ, ಗ್ರೇಡ್-2 ತಹಶೀಲ್ದಾರ್ ಸುರೇಶ್, ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಚಂದ್ರಪ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆಂಜನೇಯ, ಶಿವಪದ್ಮ, ನಿಂಗಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಹೆಚ್.ಗೀತಾ, ಪುರಸಭಾ ಆರೋಗ್ಯ ನಿರೀಕ್ಷಣಾಧಿಕಾರಿ ಪರಮೇಶ್ವರ್ ನಾಯ್ಕ್ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!