ಹರಿಹರ ಮೂಲಕ ಹಾದುಹೋಗುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿಸಿ

ಹರಿಹರ ಮೂಲಕ ಹಾದುಹೋಗುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿಸಿ

ದಾವಣಗೆರೆ, ಜು.4-  ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಗುರುವಾರ ಸಂಜೆ ಲೋಕೋಪ ಯೋಗಿ ಇಲಾಖೆಯ ಅಧಿಕಾರಿ ಗಳೊಂದಿಗೆ ಸಭೆ ನಡೆಸಿದರು.

ಹರಿಹರ, ಹೊನ್ನಾಳಿ ಹಾಗೂ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನಲ್ಲಿ ಹಾದುಹೋಗುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಈ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಂಸದರ ಗಮನಕ್ಕೆ ತಂದರು.

2016ರಲ್ಲಿ 800 ಕೋಟಿ ವೆಚ್ಚದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, 2023 ಕ್ಕೆ ಇದರ ವೆಚ್ಚ 2017 ಕೋಟಿಗೆ ಏರಿದೆ. ಇದನ್ನು ಶೀಘ್ರವೇ ಅನುಮೋದನೆಗೆ ಮೊನ್ನೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ತರಲಾಗಿದ್ದು, ಈ ಯೋಜನೆಯಿಂದ ಸಾಮಾಜಿಕ ಹಾಗೂ ಆರ್ಥಿಕ ಬಲವರ್ಧನೆ ಆಗಲಿದೆ ಎಂದು ಸಂಸದರು ಅಭಿಪ್ರಾಯಪಟ್ಟರು. ಈ ಸಭೆಯಲ್ಲಿ ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತರ ನರೇಂದ್ರಬಾಬು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವಮೂರ್ತಿ ಭಾಗವಹಿಸಿದ್ದರು.

error: Content is protected !!