ಶ್ರೀ ರಂಭಾಪುರಿ ಜಗದ್ಗುರುಗಳ ಪ್ರವಾಸ

ಶ್ರೀ ರಂಭಾಪುರಿ ಜಗದ್ಗುರುಗಳ ಪ್ರವಾಸ

 ಬಾಳೆಹೊನ್ನೂರು, ಜು. 5-    ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ಜುಲೈ ಹಾಗೂ ಆಗಸ್ಟ್ ಮಾಹೆಯಲ್ಲಿನ ಕಾರ್ಯಕ್ರಮಗಳ ವಿವರ. 

ನಾಳೆ ದಿನಾಂಕ 6ರ ಶನಿವಾರ ಬೇಲೂರು ತಾಲ್ಲೂಕು ಬಿಕ್ಕೋಡು ಗ್ರಾಮದಲ್ಲಿ ಪುರ ಪ್ರವೇಶ ಹಾಗೂ ಧರ್ಮ ಸಮಾರಂಭ, 7ರಂದು ಶಿವಮೊಗ್ಗದಲ್ಲಿ ಇಷ್ಟಲಿಂಗ ಮಹಾಪೂಜೆ ಹಾಗೂ ಶಿವದೀಕ್ಷಾ ಸಮಾರಂಭ, 8ರಂದು ಉತ್ತರ ಕನ್ನಡ ಜಿಲ್ಲೆ ಮುಂಡಗೋಡು ತಾಲ್ಲೂಕು ಹನುಮಾಪುರ ಗ್ರಾಮದಲ್ಲಿ ಲಿಂ.ಸದಾನಂದ ಶ್ರೀಗಳ 4ನೇ ವರ್ಷದ ಪುಣ್ಯಾರಾಧನಾ ಸಮಾರಂಭದ ಸಾನ್ನಿಧ್ಯ ವಹಿಸುವರು. 

ದಿನಾಂಕ 9ರಿಂದ 11ರವರೆಗೆ ಹರಿಹರದಲ್ಲಿ ಇಷ್ಟಲಿಂಗ ಮಹಾಪೂಜೆ, 12ರಂದು ಮುಧೋಳ ತಾಲ್ಲೂಕು ಲೋಕಾಪುರದಲ್ಲಿ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಸಮಾರಂಭ ನಡೆಸುವರು. ದಿನಾಂಕ 14ರಂದು ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ನಿಟ್ಟೂರಿನಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಸಭಾ ಭವನ ಉದ್ಘಾಟನಾ ಸಮಾರಂಭ, 17ರಂದು ಬೀದರ್‌ ಜಿಲ್ಲೆ ಮುಧೋಳ (ಬಿ) ಗ್ರಾಮದಲ್ಲಿ ಲಿಂ. ಶಿವಲಿಂಗ ಶಿವಾ ಚಾರ್ಯರ ಲಿಂಗಾಂಗ ಸಾಮರಸ್ಯದ ಶತಮಾನೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸುವರು. 

ದಿನಾಂಕ 21ರಂದು ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಗುರು ಪೌರ್ಣಿಮಾ ಸಮಾರಂಭದಲ್ಲಿ ಪಾಲ್ಗೊಂಡು ಭಕ್ತಾದಿಗಳಿಗೆ ದರ್ಶನಾಶೀರ್ವಾದ ನೀಡುವರು. ದಿನಾಂಕ 24ರಿಂದ 28  ರವರೆಗೆ ಬೆಂಗಳೂರು ಮಹಾನಗರದಲ್ಲಿ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಸಮಾರಂಭ, ಜುಲೈ 29ರಿಂದ ಆಗಸ್ಟ್ 3 ರವರೆಗೆ ದಾವಣಗೆರೆಯಲ್ಲಿ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಜಾಗೃತಿ ಸಮಾರಂಭ ನಡೆಸುವರು. 

ಆಗಸ್ಟ್ 4 ರಂದು ಚನ್ನಗಿರಿ ತಾಲ್ಲೂಕು ತಾವರೆಕೆರೆ ಶಿಲಾಮಠದಲ್ಲಿ ಲಿಂ.ಸಿದ್ಧಲಿಂಗ ಶ್ರೀಗಳವರ ಪುಣ್ಯ ಸ್ಮರಣೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಆಗಸ್ಟ್ 5ರಿಂದ ಸೆಪ್ಟೆಂಬರ್ 2ರವರೆಗೆ ಬಾಳೆಹೊನ್ನೂರು ಧರ್ಮ ಪೀಠದಲ್ಲಿ ವಾಸ್ತವ್ಯ ಇದ್ದು, ತಮ್ಮ 33ನೇ ವರ್ಷದ ಶ್ರಾವಣ ಪೂಜಾನುಷ್ಠಾನ ನಡೆಸುವರು ಎಂದು  ಶ್ರೀ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರ ವಿವರಿಸಿದ್ದಾರೆ.

error: Content is protected !!