ದಾವಣಗೆರೆ, ಜು.5- ಮಾಜಿ ಸೈನಿಕರು, ಮಾಜಿ ಸೈನಿಕರ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೀಟು ಹಂಚಿಕೆಯ ಮೇರೆಗೆ, ಕೇಂದ್ರೀಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿಯಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಎನ್.ಇ.ಇ.ಟಿ) ನಲ್ಲಿ ಅರ್ಹತೆ ಪಡೆದಿರುವ ವಿದ್ಯಾರ್ಥಿಗಳು ಕೇಂದ್ರೀಯ ಸೈನಿಕ ಮಂಡಳಿ ಜಾಲತಾಣ `HYPERLINK “http://online.ksb.gov.in/” \t “_blank” ONLINE.KSB.GOV.IN’ ಇಲ್ಲಿ ಇದೇ ದಿನಾಂಕ 9 ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಪಡೆದ ದೃಢೀಕೃತ ಅರ್ಹತಾ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ. ಅಥವಾ ದೂ.ಸಂಖ್ಯೆ 08182 – 220925 ಗೆ ಕರೆ ಮಾಡಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ.ಹಿರೇಮಠ ಇವರು ತಿಳಿಸಿರುತ್ತಾರೆ.