ಪೊಲೀಸ್ ಮಹಾ ನಿರೀಕ್ಷಕರಾಗಿ ಬಿ.ರಮೇಶ್ ಅಧಿಕಾರ ಸ್ವೀಕಾರ

ಪೊಲೀಸ್ ಮಹಾ ನಿರೀಕ್ಷಕರಾಗಿ ಬಿ.ರಮೇಶ್ ಅಧಿಕಾರ ಸ್ವೀಕಾರ

ದಾವಣಗೆರೆ, ಜು. 5-ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕರಾಗಿ ರಮೇಶ್.ಬಿ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಪೊಲೀಸ್ ಮಹಾ ನಿರೀಕ್ಷಕ ಡಾ. ಕೆ ತ್ಯಾಗರಾಜನ್ ಅವರು ಡಿಐಜಿ  ರಮೇಶ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಈ ಸಮಯದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ ಎಂ ಸಂತೋಷ್, ಮಂಜುನಾಥ್ ಜಿ ಇತರರು ಉಪಸ್ಥಿತರಿದ್ದರು.

ಕಾನೂನು, ಸುವ್ಯವಸ್ಥೆಗೆ ಮೊದಲ ಆದ್ಯತೆಪೊಲೀಸ್ ಮಹಾ ನಿರೀಕ್ಷಕ ಬಿ.ರಮೇಶ್

ಕಾನೂನು ಮತ್ತು ಸುವ್ಯವಸ್ಥೆಗೆ ಮೊದಲ ಆದ್ಯತೆ ನೀಡಲಾಗುವುದು. ಚನ್ನಗಿರಿಯ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದಂಥ ಪ್ರಕರಣಗಳು ಮರುಕಳಿಸದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕ ಬಿ. ರಮೇಶ್ ಅವರು ತಿಳಿಸಿದರು.

ನಗರದಲ್ಲಿ ಶುಕ್ರವಾರ ಅಧಿಕಾರ ವಹಿಸಿಕೊಂಡ ನಂತರ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಾ, ಕಾನೂನು ವಿರೋಧಿ ಚಟುವಟಿಕೆ ಸಹಿಸುವ ಪ್ರಶ್ನೆಯೇ ಇಲ್ಲ. ಕಾನೂನು ಮತ್ತು ಸುವ್ಯವಸ್ಥೆ ಹದಗೆಡದಂತೆ ಎಚ್ಚರ ವಹಿಸಲಾಗುವುದು ಎಂದರು.

ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆಯಲ್ಲಿ ಕೆಲಸ ಮಾಡಿಲ್ಲ. ಇಲ್ಲಿನ ಬಗ್ಗೆ ಹೆಚ್ಚು ಮಾಹಿತಿ ಇಲ್ಲ. ಚಿತ್ರದುರ್ಗಕ್ಕೆ ಎರಡು ಬಾರಿ ಬಂದೋಬಸ್ತ್ ಗೆ ಬಂದಿದ್ದೆ. ಹಾವೇರಿಯ ಬಂಕಾಪುರ ಸೇರಿದಂತೆ ಕೆಲ ಪ್ರಕರಣಗಳಲ್ಲಿ ಕೆಲಸ ಮಾಡಿದ ಅನುಭವ ನನಗೆ ಇದೆ. 

ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ನಾನು ಮಾಹಿತಿ ಪಡೆಯುತ್ತೇನೆ. ನನಗೆ ಎಸ್ಪಿ ಆಗಿ ಕೆಲಸ ಮಾಡಿದ ಅನುಭವ ಇದೆ. ಪೊಲೀಸರ ಬಗ್ಗೆ ಜನರಲ್ಲಿ ಉತ್ತಮ ಭಾವನೆ ಮೂಡಬೇಕು. 

ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಾಗುವುದು. ನಾಲ್ಕು ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಉತ್ತಮ ಕೆಲಸ ಮಾಡುವತ್ತ ಹೆಚ್ಚಿನ ಗಮನ ಹರಿಸಲಾಗುವುದು ಎಂದು ರಮೇಶ್ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ ಎಂ. ಸಂತೋಷ, ಮಂಜುನಾಥ ಜಿ ಹಾಗೂ ಜಿಲ್ಲೆಯ ಪೊಲೀಸ್ ಉಪಾಧೀಕ್ಷಕರು, ಕಚೇರಿ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

error: Content is protected !!