ಎ.ಆರ್.ಜಿ. ಕಾಲೇಜಿನಲ್ಲಿ ಸಾಂಸ್ಕೃತಿಕ ಉತ್ಸವ

ಎ.ಆರ್.ಜಿ. ಕಾಲೇಜಿನಲ್ಲಿ ಸಾಂಸ್ಕೃತಿಕ ಉತ್ಸವ

ದಾವಣಗೆರೆ, ಜು. 5 – ನಗರದ ಎ.ಆರ್.ಜಿ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ನಡೆಯುತ್ತಿರುವ ಎ.ಆರ್.ಜಿ. ವೈಭವ – 2024ರ ಅಂಗವಾಗಿ  ಇಂದು ಸಾಂಸ್ಕೃತಿಕ ಉತ್ಸವ ಆಯೋಜಿಸಲಾಗಿತ್ತು.

ಪರಿಸರ, ಆರೋಗ್ಯ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ಸಮಾರಂಭಗಳನ್ನು ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ಮೂರನೇ ದಿನ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಉತ್ಸವವನ್ನು ಉದ್ಯಮಿ ಸಮರ್ಥ ಶಾಮನೂರು ಉದ್ಘಾಟಿಸಿದರು.  

ದಾವಣಗೆರೆ ವಿ.ವಿ. ಅರ್ಥಶಾಸ್ತ್ರ ವಿಭಾಗದ ಅಧ್ಯಕ್ಷ ಹುಚ್ಚೇಗೌಡ ಮಾತನಾಡಿ, ವಿದ್ಯಾರ್ಥಿಗಳು ಕ್ಷಣಿಕ ಕಾಲದ ಹರ್ಷದ ಕಡೆ ಗಮನ ಹರಿಸದೇ, ಜೀವಮಾನದ ಸಾಧನೆಗೆ ಆದ್ಯತೆ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ವಿಶ್ವವಿದ್ಯಾಲಯಗಳ ಹಾಗೂ ಕಾಲೇಜು ಅಧ್ಯಾಪಕರ ಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರೊ. ಸಿ.ಹೆಚ್. ಮುರುಗೇಂದ್ರಪ್ಪ, ಎ.ಆರ್.ಜಿ. ಕಾಲೇಜಿನ ಆಡಳಿತ ಸಮಿತಿ ಅಧ್ಯಕ್ಷ ಎ.ಜಿ. ಮಂಜುನಾಥ್, ಎ.ಆರ್.ಜಿ. ಕಾಲೇಜಿನ ಪ್ರಾಂಶುಪಾಲ ಜಿ.ಬಿ. ಬೋರಯ್ಯ, ಎ.ಆರ್.ಜಿ. ಪಿ.ಯು. ಕಾಲೇಜಿನ ಪ್ರಾಂಶುಪಾಲ ಕೆ. ಬೊಮ್ಮಣ್ಣ, ಎ.ಆರ್.ಜಿ. ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಸ್.ಬಿ. ನಾಗರಾಜ್, ಕನ್ನಡ ಪರ ಹೋರಾಟ ಗಾರ ಶಿವರತನ್ ಹಾಗೂ ಎ.ಆರ್.ಜಿ. ಕಾಲೇಜಿನ ವಿದ್ಯಾರ್ಥಿ ಕಾರ್ಯದರ್ಶಿ ಈಶ್ವರ್  ಮತ್ತಿತರರು ಉಪಸ್ಥಿತರಿದ್ದರು.

error: Content is protected !!