ದಾವಣಗೆರೆ ಜು.8- ಪ್ರಸಕ್ತ ಸಾಲಿನಲ್ಲಿ 1ನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿಯಲ್ಲಿ ರಾಜ್ಯದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 30ರೊಳಗಾಗಿ ಕಚೇರಿಗೆ ಸಲ್ಲಿಸಬಹುದು ಮತ್ತು ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆ.31ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ 08182-220925 ಸಂಪರ್ಕಿಸಿ