ದಾವಣಗೆರೆ, ಜು.8- ನಾಲ್ಕು ದಶಕಗಳಿಂದ ರಾಜಕೀಯದಲ್ಲಿರುವ ಸಿಎಂ ಸಿದ್ದರಾಮಯ್ಯನವರು ಪರಿಶುದ್ಧ ರಾಜಕಾರಣಿಯಾಗಿದ್ದು, ಭ್ರಷ್ಟಾಚಾರ ವನ್ನು ಹತ್ತಿರಕ್ಕೂ ಬಿಟ್ಟುಕೊಂಡಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ತಿಳಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೂಡಾ ಹಗರಣದಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂದು ಹೇಳಿರುವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಕೇವಲ ಹಿಟ್ ಆಂಡ್ ರನ್ ಆರೋಪ ಎಂದರು.
ಸಿದ್ದರಾಮಯ್ಯ ಅವರ ಪತ್ನಿಗೆ ತವರು ಮನೆಯಿಂದ ಉಡುಗೊರೆ ಯಾಗಿ ಬಂದ 3.16 ಎಕರೆ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಕೊಂಡು, ಅದಕ್ಕೆ ಬದಲಾಗಿ ನಿವೇಶನ ಕೊಟ್ಟಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಎಂದು ತಿಳಿಸಿದರು.
2021ರಲ್ಲಿ ಅಧಿಕಾರದಲ್ಲಿದ್ದ ಅಂದಿನ ಬಿಜೆಪಿ ಸರ್ಕಾರವೇ 50:50 ನಿಯಮ ಮಾಡಿ, ಬದಲಿ ನಿವೇಶನ ಕೊಟ್ಟು ಈಗ ಅಕ್ರಮ ಆಗಿದೆ ಎನ್ನುತ್ತಿದ್ದಾರೆ ಎಂದು ದೂರಿದರು. ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋ ಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು, ಅಂಕಿ-ಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದರು.
ಸಿ.ಎಂ ಸಿದ್ದರಾಮಯ್ಯ ಅವರ ಪತ್ನಿ ಕಳೆದುಕೊಂಡಿದ್ದ ಜಮೀನಿಗೆ ಕಾನೂನು ಬದ್ಧವಾಗಿ ಮೂಡಾ ಬೇರೆ ಕಡೆ ಭೂಮಿ ನೀಡಿದೆ ಆದರೂ ಬಿಜೆಪಿಯವರು ಪ್ರಚಾರದ ಆಸೆಗಾಗಿ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕೆ.ಎಂ. ಮಂಜು ನಾಥ್, ಬಿ.ಎಚ್. ಉದಯ್ ಕುಮಾರ್, ಎಂ.ಕೆ. ಲಿಯಾಖತ್ ಅಲಿ, ಡಿ. ಶಿವಕು ಮಾರ್, ಬಿ.ಎಸ್. ಸುರೇಶ್, ವಿನಾಯಕ, ಮುಬಾರಕ್ ಇತರರಿದ್ದರು.