ಶ್ರೀ ವಿನಾಯಕ ಎಜುಕೇಷನ್ ಟ್ರಸ್ಟ್ನ ಸುಶೀಲಮ್ಮ ಬಂಕಾಪುರದ ಚನ್ನಬಸಪ್ಪ ಪ್ರಥಮ ದರ್ಜೆ ಮಹಿಳಾ ಕಾಲೇಜು (ಎಸ್ಬಿಸಿ) ಹಾಗೂ ಅಥಣಿ ಸ್ನಾತಕೋತ್ತರ ಕೇಂದ್ರದ 2023-24ನೇ ಸಾಲಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಸಂಘದ ವಾರ್ಷಿಕೋತ್ಸವ, ಸಾಂಸ್ಕೃತಿಕ, ಕ್ರೀಡಾ, ಎನ್ನೆಸ್ಸೆಸ್ ಘಟಕ ಹಾಗೂ ರೆಡ್ಕ್ರಾಸ್ ಘಟಕದ ಸಮಾರೋಪ ಸಮಾರಂಭವು ಇಂದು ಬೆಳಿಗ್ಗೆ 10.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನೆರವೇರಲಿದೆ.
ಎಸ್.ಬಿ.ಸಿ. ಪ್ರಥಮ ದರ್ಜೆ ಕಾಲೇಜಿನ ಅಧ್ಯಕ್ಷ ಬಿ.ಸಿ. ಉಮಾಪತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿವಿ ಕುಲಸಚಿವ ಡಾ. ಸಿ.ಕೆ. ರಮೇಶ್, ಮಾಗನೂರು ಬಸಪ್ಪ ಪದವಿ ಪೂರ್ವ ವಿಜ್ಞಾನ ಕಾಲೇಜಿನ ನಿರ್ದೇಶಕ ಡಾ. ಜಿ.ಎನ್.ಹೆಚ್. ಕುಮಾರ್, ಶ್ರೀ ವಿನಾಯಕ ಎಜುಕೇಷನ್ ಟ್ರಸ್ಟ್ನ ಟ್ರಸ್ಟಿ ಅಥಣಿ ಪ್ರಶಾಂತ್ ಅವರು ಉಪಸ್ಥಿತರಿರುವರು.
ಎಸ್ಬಿಸಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಅಥಣಿ ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲ ಡಾ. ಕೆ. ಷಣ್ಮುಖ ಪ್ರಾಸ್ತಾವಿಕ ನುಡಿಗಳ ನ್ನಾಡಲಿದ್ದಾರೆ.