ಭರಮಸಾಗರ-ಚಿತ್ರದುರ್ಗ ರೈಲ್ವೆ ಕಾಮಗಾರಿಗೆ ಶೀಘ್ರ ಭೂಮಿ ಪೂಜೆ

ಭರಮಸಾಗರ-ಚಿತ್ರದುರ್ಗ ರೈಲ್ವೆ ಕಾಮಗಾರಿಗೆ ಶೀಘ್ರ ಭೂಮಿ ಪೂಜೆ

ದಾವಣಗೆರೆ – ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಯೋಜನೆ

ಚಿತ್ರದುರ್ಗ, ಜು.12- ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಯೋಜನೆಗೆ ಸಂಬಂ ಧಿಸಿದಂತೆ ಜಿಲ್ಲೆ ವ್ಯಾಪ್ತಿಯ ಭರಮ ಸಾಗರ-ಚಿತ್ರದುರ್ಗ ಮಧ್ಯದ ಕಾಮ ಗಾರಿ ಚಾಲನೆಗೆ ಶೀಘ್ರ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಸಂಸದ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.

ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ವಿಭಾಗ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಗಳ ಸಭೆ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಈ ಯೋಜನೆಗೆ ಅನುಮೋದನೆ ಪಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಈ ಭಾಗದ ಜನರ ಬಹುದಿ ನಗಳ ಬೇಡಿಕೆಯಾದ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಯೋಜನೆ ಜಿಲ್ಲೆಗೆ ಅಗತ್ಯ ವಾಗಿದೆ. ಯೋಜನೆಗೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಒಟ್ಟು 1210 ಎಕರೆ ಭೂಮಿ ಅವಶ್ಯಕವಾಗಿದೆ. ಇದರಲ್ಲಿ 1053 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡು ರೈಲ್ವೆ ಇಲಾಖೆಗೆ ನೀಡಲಾಗಿದೆ. ಬಾಕಿಯಿರುವ 145 ಎಕರೆ ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಯೋಜನೆ ವಿಳಂಬವಾಗದಂತೆ ರೈಲ್ವೆ ಕಾಮಗಾರಿಗೆ ಅಗತ್ಯ ಇರುವ ಭೂಮಿ ಸ್ವಾಧೀನ ಹಾಗೂ ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಮಾಡುವಂತೆ ಸೂಚಿಸಿದರು.

ಭರಮಸಾಗರ-ಚಿತ್ರದುರ್ಗ ಮಧ್ಯದ ಸುಮಾರು 29 ಕಿಲೋ ಮೀಟರ್‌ ಉದ್ದದ ರೈಲ್ವೇ ಭೂಸ್ವಾಧೀನ ಪ್ರಕ್ರಿಯೆ ಶೇ.90 ರಷ್ಟು ಮುಕ್ತಾಯಗೊಂಡಿದ್ದು, ಭೂಮಿ ಹಸ್ತಾಂತರ ಮಾಡಲಾಗಿದೆ. ಕಾಮಗಾರಿಯ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರ ರಾಜ್ಯದ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಂದ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮ ಆಯೋಜಿಸುವಂತೆ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

error: Content is protected !!