ನಗರದಲ್ಲಿ ಇಂದು ಸಿಜಿಕೆ, ಬಸವ ಜ್ಯೋತಿ ಪ್ರಶಸ್ತಿ ಪ್ರದಾನ

ನಗರದಲ್ಲಿ ಇಂದು ಸಿಜಿಕೆ,  ಬಸವ ಜ್ಯೋತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಂಗ ಪರಿಷತ್ತು, ಶ್ರೀ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ವೇದಿಕೆ ಕೂಲಂಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 11.30 ಕ್ಕೆ ರೋಟರಿ ಬಾಲಭವನದಲ್ಲಿ ಸಿಜಿಕೆ ಪ್ರಶಸ್ತಿ ಪ್ರದಾನ, ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯಲಿದೆ.

ಪಾಂಡೋಮಟ್ಟಿ-ಕಮ್ಮತ್ತಹಳ್ಳಿ ವಿರಕ್ತಮಠದ ಡಾ. ಗುರುಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರಂಗಕರ್ಮಿ ಹೆಚ್.ಎಸ್. ದ್ಯಾಮೇಶ್ ಕಾರ್ಯಕ್ರಮ ಉದ್ಘಾಟಿಸುವರು. ಬಸಾಪುರ ಶ್ರೀ ರೇವಣಸಿದ್ಧೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ಎಂ.ಎಸ್. ನಾಗರಾಜಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ.ಎ.ಬಿ. ರಾಮಚಂದ್ರಪ್ಪ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ. ಮಲ್ಲಿಕಾರ್ಜುನ ಕಲಮರಳ್ಳಿ, ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ್ ಎಸ್. ಬಡದಾಳ್ ಭಾಗವಹಿಸಲಿದ್ದಾರೆ.

ಇದೇ ವೇಳೆ ಚಿಕ್ಕಬೆನ್ನೂರು ರಂಗಕರ್ಮಿ ಜಿ.ಹೆಚ್. ರುದ್ರೇಶ್ ಇವರಿಗೆ `ಸಿಜಿಕೆ’ ಪ್ರಶಸ್ತಿ ಹಾಗೂ ವಿಭೂತಿ ಬಸವಾನಂದರಿಗೆ `ಬಸವ ಜ್ಯೋತಿ’ ಪ್ರಶಸ್ತಿ ಪ್ರದಾನ ಮಾಡಲಾಗುವುದು.  ಕಲಾವಿದರಾದ ಬಿ.ಇ. ತಿಪ್ಪೇಸ್ವಾಮಿ ಮತ್ತು ಸಂಗಡಿಗರಿಂದ ಸುಗಮ ಸಂಗೀತ ಮತ್ತು ಬಿ.ಹನುಮಂತಾಚಾರ್ ಮತ್ತು ಸಂಗಡಿಗರಿಂದ ವೀರಗಾಸೆ ಪ್ರದರ್ಶನ ಇರುತ್ತದೆ. 

error: Content is protected !!