ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ತಾಲ್ಲೂಕು ಮೆಳ್ಳೇಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಡಾ.ಫ.ಗು. ಹಳಕಟ್ಟಿಯವರ ಜಯಂತಿ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ಆರ್. ರಮಾನಂದ ದತ್ತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮೆಳ್ಳೇಕಟ್ಟೆ ಸರ್ಕಾರಿ ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಎ.ಪಿ. ರವಿಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶರಣ ಸಾಹಿತ್ಯ ಪರಿಷತ್ತಿನ ದಾವಣಗೆರೆ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಬಿ. ರುದ್ರಗೌಡ ಗೋಪನಾಳು ಅಧ್ಯಕ್ಷತೆ ವಹಿಸಲಿದ್ದು, `ಫ.ಗು ಹಳಕಟ್ಟಿಯವರು ಮತ್ತು ವಚನಗಳಲ್ಲಿ ನೈತಿಕತೆ’ ವಿಷಯ ಕುರಿತು ಶ.ಸಾ.ಪ. ದಾವಣಗೆರೆ ತಾ. ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಎಂ. ವಿಶ್ವೇಶ್ವರಯ್ಯ ಹಾಗೂ `ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರು’ ವಿಷಯವಾಗಿ ಲೇಖಕರಾದ ಕು. ಬಿಂದು ಆರ್.ಡಿ. ರಾಂಪುರ ಅನುಭಾವ ನೀಡಲಿದ್ದಾರೆ ಎಂದು ಪರಿಷತ್ ಜಿಲ್ಲಾಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ತಿಳಿಸಿದ್ದಾರೆ.