ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ವತಿಯಿಂದ ಇಂದು ಬೆಳಿಗೆ 11.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಜಿಲ್ಲಾಧಿಕಾರಿಗಳು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ಜಿಲ್ಲಾ ಸಂಸ್ಥೆಯ ಪೋಷಕರಾದ ಗಂಗಾಧರಸ್ವಾಮಿ. ಜಿ.ಎಂ ಪ್ರಶಸ್ತಿ ಪ್ರಧಾನ ಮಾಡುವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷ ಆರ್.ಡಿ.ಬದ್ರಿನಾಥ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಬಿ.ಇಟ್ನಾಳ್ ವಾರ್ಷಿಕ ಕಾರ್ಯಕ್ರಮಗಳ ಯೋಜನೆ ಪುಸ್ತಕ ಬಿಡುಗಡೆಗೊಳಿಸುವರು. ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ. ಕೊಟ್ರೇಶ್ ಭಾಗವಹಿಸುವರು.
January 10, 2025