ನಗರ ಪಾಲಿಕೆಯ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಗಂಗಾಧರಸ್ವಾಮಿ ಸೂಚನೆ
ದಾವಣಗೆರೆ, ಜು. 22 – ಕುಡಿಯುವ ನೀರನ್ನು ಪರೀಕ್ಷಿಸಿ ಸಮರ್ಪಕವಾಗಿ ಸರಬರಾಜು ಮಾಡಬೇಕು ಎಂದು ನೀರು ಸರಬರಾಜು ಇಂಜಿನಿಯರ್ಗಳಿಗೆ ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರ ಸ್ವಾಮಿ ನಿರ್ದೇಶನ ನೀಡಿದರು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಇಂದು ಏರ್ಪಾಡಾಗಿದ್ದ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಘನ ತ್ಯಾಜ್ಯ ನಿರ್ವಹಣೆಯನ್ನು ಸಮ ರ್ಪಕವಾಗಿ ನಿರ್ವಹಿಸಬೇಕು. ಮನೆಗಳಿಂದ ಕಸ ಸಂಗ್ರಹಣೆ ಮಾಡುವಾಗಲೇ ಒಣ ಕಸ, ಹಸಿ ಕಸವನ್ನು ಪ್ರತ್ಯೇ ಕವಾಗಿ ಸಂಗ್ರಹಿಸಲು ಆ ಮೂ ಲಕ ಘನ ತ್ಯಾಜ್ಯವನ್ನು ಶೇ.100 ರಷ್ಟು ವಿಂಗಡಣೆ ಮಾಡುವ ಬಗ್ಗೆ ಒತ್ತು ನೀಡಲು ಮತ್ತು ಈ ಬಗ್ಗೆ ಐಇಸಿ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಆರೋಗ್ಯ ಶಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಡೆಂಗ್ಯೂ ಹರಡುತ್ತಿರುವುದರಿಂದ ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಮತ್ತು ಫಾಗಿಂಗ್, ಸ್ಪ್ರೇ ಮಾಡಲು ಮತ್ತು ಸೊಳ್ಳೆಗಳು ಉತ್ಪತ್ತಿ ಯಾಗುವ ಹಾಟ್ ಸ್ಪಾಟ್ಗಳ ನಿರ್ಮೂ ಲನೆಗೆ ಕ್ರಮ ತೆಗೆದು ಕೊಳ್ಳಬೇಕೆಂದು ಹೇಳಿದರು.
ಕಾಮಗಾರಿಗಳಿಗೆ ಸಂಬಂ ಧಿಸಿದಂತೆ ಪ್ರಗತಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾ ರಿಗಳು, ಎಸ್ಎಫ್ಸಿ, 15ನೇ ಹಣಕಾಸು, ಎಂಜಿಎನ್ವಿವೈ ಮುಂತಾದ ಎಲ್ಲಾ ಯೋಜ ನೆಗಳಡಿಯಲ್ಲಿ ಕೈಗೊಂಡ ಕಾಮಗಾರಿಗಳನ್ನು ನಿಗದಿತ ಸಮಯ ದೊಳ ಗಾಗಿ ಪೂರ್ಣಗೊಳಿಸಲು ಇಂಜಿನಿಯರುಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಯೋಜನಾ ನಿರ್ದೇಶಕ ಡಾ. ಎನ್. ಮಹಾಂತೇಶ್, ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ, ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.