ನಗರದಲ್ಲಿ ಇಂದು ಬಸವ ಬಳಗದಿಂದ ಸಂವಾದ

ಬಸವ ಬಳಗ, ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ ಹಾಗೂ ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ಇಂದು ಸಂಜೆ 5.30 ಕ್ಕೆ ಸರಸ್ವತಿ ಬಸವ ಬಳಗದ ಆವರಣದಲ್ಲಿ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಸವ ಬಳಗದ ಕಾರ್ಯದರ್ಶಿ ವೀಣಾ ಮಂಜುನಾಥ್ ತಿಳಿಸಿದರು.

ಬಸವ ಬಳಗದ ಅಧ್ಯಕ್ಷ ಹುಚ್ಚಪ್ಪ ಮಾಸ್ತರ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಆಗಮಿಸಲಿದ್ದಾರೆ.

ಕರುಣಾ ಜೀವ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಶಿವನಕೆರೆ ಬಸವಲಿಂಗಪ್ಪ ಪ್ರಾಸ್ತಾ ವಿಕವಾಗಿ ಮಾತನಾಡಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ. ಸಿದ್ಧರಾಮಯ್ಯ `ಲಿಂಗಾಯತ ಧರ್ಮ ಸಮಕಾಲೀನ ಅವಶ್ಯಕತೆ’ ವಿಷಯ ಕುರಿತು ಉಪನ್ಯಾಸ ನೀಡುವ ಮೂಲಕ ಸಂವಾದದಲ್ಲಿ ಪಾಲ್ಗೊಳ್ಳಲಿ ದ್ದಾರೆ. `ಬಸವಣ್ಣ ಸಾಂಸ್ಕೃತಿಕ ನಾಯಕ ಏಕೆ?’ ವಿಷಯ ಕುರಿತು ವಿಜಯಪುರದ ಶರಣ ಚಿಂತಕ ಡಾ.ಜೆ.ಎಸ್. ಪಾಟೀಲ್ ಉಪನ್ಯಾಸ ನೀಡಲಿದ್ದಾರೆ.

error: Content is protected !!