ದಾವಣಗೆರೆ, ಜು. 25- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ರೈತರ ನಿರೀಕ್ಷೆಗಳನ್ನು ಹುಸಿಗೊಳಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಬಲ್ಲೂರು ರವಿಕುಮಾರ್ ಟೀಕಿಸಿದ್ದಾರೆ.
2014 ಹಾಗೂ 2019 ರ ಚುನಾವಣೆಯಲ್ಲಿ ಸ್ವಾಮಿನಾಥನ್ ವರದಿ ಜಾರಿ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದರು. ನಂತರ ಬಂಡವಾಳ ಷಾಹಿ ಕಪಿಮುಷ್ಠಿಗೆ ಸಿಲುಕಿ, ವರದಿ ಜಾರಿ ಮಾಡಲಿಲ್ಲ ಎಂದು ಹೇಳಿದ್ದಾರೆ.
ಆಂಧ್ರ ಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಣೆ ಹಾಕಿದ್ದು, ಪ್ರಧಾನಿ ನರೇಂದ್ರ ಮೋದಿಯರು ಶ್ರೀಮಂತರ ಪರ ಕೆಲಸ ಮಾಡುತ್ತಿದ್ದಾರೆ.
ಮುಂದೊಂದು ದಿನ ನೀವು ಸಹ ವಿರೋಧ ಪಕ್ಷದಲ್ಲಿ ಕೂರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.