ನಾಳೆ ಆರೂಢ ದಾಸೋಹಿ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ

ನಾಳೆ ಆರೂಢ ದಾಸೋಹಿ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ - Janathavaniದಾವಣಗೆರೆ, ಜು. 25- ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶರಣ ಮಾಗನೂರು ಬಸಪ್ಪ ಪ್ರತಿ ಷ್ಠಾನ ಸ್ಥಾಪಿತ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಾಡಿದ್ದು ದಿನಾಂಕ 27ರಂದು ಬೀದರ್‌ನ ಡಾ.ಚನ್ನಬಸವ ಪಟ್ಟದೇವರ ರಂಗ ಮಂದಿರ ಹಾಗೂ ಬರುವ ಆಗಸ್ಟ್ 3ರಂದು ದಾವಣಗೆರೆ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿ ಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಜು.27ರಂದು ಬೆಳಿಗ್ಗೆ 10.30ಕ್ಕೆ ಬೀದರ್‌ನ ಡಾ.ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2023ರ ಪ್ರಶಸ್ತಿಯನ್ನು ಬಸವ ಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದೇವರು ಅವರಿಗೆ ನೀಡಲಾಗುವುದು ಎಂದರು.

ನಾಡೋಜ ಡಾ.ಬಸವಲಿಂಗ ಪಟ್ಟದೇವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದು,  ಹುಲಸೂರು ಮಠದ ಡಾ.ಶಿವಾನಂದ ಮಹಾಸ್ವಾಮೀಜಿ, ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದೇವರುಗಳು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. 

ಬೀದರ ಬಸವಗಿರಿ ಬಸವ ಸೇವಾ ಪ್ರತಿಷ್ಠಾನದ ಡಾ.ಗಂಗಾಬಿಕೆ ಅಕ್ಕ ಅವರ ದಿವ್ಯ ಸಮ್ಮುಖದಲ್ಲಿ ಅರಣ್ಯ, ಜೈವಿಕ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ ಸಮಾರಂಭ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬೀದರ್‌ ಜಿಲ್ಲಾಧ್ಯಕ್ಷ ಸುರೇಶ ಚೆನ್ನಶೆಟ್ಟಿ ಆಶಯ ನುಡಿಗಳನ್ನು, ಪ್ರಾಚಾರ್ಯ ಡಾ.ಬಸವರಾಜ ಬಲ್ಲೂರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ.ಹೆಚ್.ಎಸ್. ಮಂಜುನಾಥ ಕುರ್ಕಿ ಶರಣ ಮಾಗನೂರು ಬಸಪ್ಪನವರ ವ್ಯಕ್ತಿತ್ವ ಕುರಿತು ಮಾತನಾಡಲಿದ್ದಾರೆ ಎಂದರು. ಪ್ರಶಸ್ತಿಯು 50 ಸಾವಿರ ರೂ. ನಗದು ಹಾಗೂ ಫಲಕ ಹೊಂದಿರುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾಗನೂರು ಬಸಪ್ಪ ಪ್ರತಿಷ್ಠಾನದ ಆಡಳಿತಾಧಿಕಾರಿ ಎಸ್.ಆರ್. ಶಿರಗುಂಬಿ,  ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ, ಕೋಶಾಧ್ಯಕ್ಷ ರಾಘವೇಂದ್ರ ನಾಯರಿ, ಸಂಘಟನಾ ಕಾರ್ಯದರ್ಶಿ ಜಿಗಳಿ ಪ್ರಕಾಶ್, ಪದಾಧಿಕಾರಿಗಳಾದ ಸತ್ಯಭಾಮ, ಮಂಜುನಾಥ್ ಉಪಸ್ಥಿತರಿದ್ದರು.

ಆ.3ರಂದು 2024ರ ಪ್ರಶಸ್ತಿ ಪ್ರದಾನ ಸಮಾರಂಭ

ನಾಳೆ ಆರೂಢ ದಾಸೋಹಿ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ - Janathavaniಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ 2024ರ ಪ್ರಶಸ್ತಿ ಪ್ರದಾನ ಸಮಾರಂಭವು ನಗರದ ಕುವೆಂಪು ಕನ್ನಡ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು.

ಧಾರವಾಡದ ವಚನ ಸಾಹಿತ್ಯ ಸಂಶೋಧಕ ಡಾ.ವೀರಣ್ಣ ಬಿ.ರಾಜೂರ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿ ವಹಿಸಲಿದ್ದಾರೆ. 

ಮುಖ್ಯ ಅತಿಥಿಗಳಾಗಿ ಜವಳಇ ಉದ್ಯಮಿ ಬಿ.ಸಿ.  ಉಮಾಪತಿ, ಅತಿಥಿಗಳಾಗಿ ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ.ಹೆಚ್.ಎಸ್. ಮಂಜುನಾಥ ಕುರ್ಕಿ ಆಗಮಿಸಲಿದ್ದಾರೆ. ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನದ ಅಧ್ಯಕ್ಷ ಎಂ.ಬಿ. ಸಂಗಮೇಶ್ವರ ಗೌಡ್ರು ಅಧ್ಯಕ್ಷತೆ ವಹಿಸಲಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಸಿ. ಸೋಮಶೇಖರ್ ಅಭಿನಂದನಾ ನುಡಿಗಳನ್ನಾಡಲಿದ್ದು, ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಡಾ.ಹೆಚ್.ವಿ. ವಾಮದೇವಪ್ಪ ಮಾಗನೂರು ಬಸಪ್ಪ ಅವರ ವ್ಯಕ್ತಿತ್ವ ಕುರಿತು ಮಾತನಾಡಲಿದ್ದಾರೆ ಎಂದರು.

error: Content is protected !!