ದಾವಣಗೆರೆ, ಜು. 27 – ಭರ್ತಿಯಾಗಿರುವ ಭದ್ರಾ ಜಲಾಶಯಕ್ಕೆ ನಾಡಿದ್ದು ದಿನಾಂಕ 30 ರ ಮಂಗಳವಾರ ಬೆಳಿಗ್ಗೆ 11ಕ್ಕೆ ವಿಶೇಷ ಪೂಜೆಯೊಂದಿಗೆ, ರೈತ ಸಮುದಾಯಕ್ಕೆ ಒಳ್ಳೆಯದಾಗಲಿ ಹಾಗೂ ಪ್ರತಿ ವರ್ಷ ಭದ್ರಾ ಜಲಾಶಯ ಇದೇ ರೀತಿ ಮೈದುಂಬಿಕೊಳ್ಳಲಿ ಎಂದು ಸಂಕಲ್ಪಿಸಿ, ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿಯಿಂದ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮಾಜಿ ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ.ಹರೀಶ್, ಪಾಲಿಕೆ ಉಪ ಮೇಯರ್ ಯಶೋಧ ಹೆಗ್ಗಪ್ಪ, ಮಾಜಿ ಶಾಸಕರುಗಳಾದ ಎಸ್.ವಿ.ರಾಮಚಂದ್ರ, ಪ್ರೊ.ಲಿಂಗಣ್ಣ, ಹೆಚ್.ಪಿ.ರಾಜೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ್ ಹನಗವಾಡಿ, ಯಶವಂತರಾವ್ ಜಾಧವ್, ವಿಧಾನ ಪರಿಷತ್ ಸದಸ್ಯರುಗಳಾದ ಸಿ.ಟಿ. ರವಿ, ಎನ್.ರವಿಕುಮಾರ್, ಕೆ.ಎಸ್.ನವೀನ್, ಮಹಾನಗರ ಪಾಲಿಕೆ ಸದಸ್ಯರುಗಳು, ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಜಿಲ್ಲಾ ಬಿಜೆಪಿ ಮುಖಂಡರು ಬಾಗಿನ ಸಮರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ತಿಳಿಸಿದ್ದಾರೆ.