ನಗರದಲ್ಲಿಂದು ಸಾಂಸ್ಕೃತಿಕ ಕಾರ್ಯಕ್ರಮ

ರಾಜನಹಳ್ಳಿ ಸೀತಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಆವರಣದಲ್ಲಿ ಸಾಂಸ್ಕೃತಿಕ, ಕ್ರೀಡಾ, ರೆಡ್ ಕ್ರಾಸ್, ರೇಂಜರ್ಸ್ ಮತ್ತು ಎನ್.ಎಸ್.ಎಸ್. ಚಟುವಟಿಕೆಗಳ ಉದ್ಘಾಟನಾ ಸಮಾರಂಭ  ನಡೆಯಲಿದೆ. 

ಶಾಸಕ ಶಾಮನೂರು ಶಿವಶಂಕರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಪ್ರಾಚಾರ್ಯ ಟಿ.ಎ.ಕುಸಗಟ್ಟಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳು : ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಎಸ್.ಜಿ,  ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಜಿ ಶಿವಕುಮಾರ್, ಪಾಲಿಕೆ ಸದಸ್ಯರಾದ ಎಸ್.ಟಿ ವೀರೇಶ್ ಹಾಗೂ ಇನ್ನಿತರರು.

error: Content is protected !!