ಹರಿಹರ, ಅ. 4- ನಗರದ ಹೊಸಭರಂಪುರ ಬಡಾವಣೆ, ಗಾಂಧಿನಗರ, ತೆಗ್ಗಿನಕೇರಿ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಇತ್ತೀಚೆಗೆ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗಿರುವುದರಿಂದ ಆರೋಗ್ಯ ಇಲಾಖೆಯ ವತಿಯಿಂದ ಮನೆ ಮನೆಗೆ ತೆರಳಿ ಲಾರ್ವಾ ಸರ್ವೆ ಮಾಡಿ ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯ ಇಲಾಖೆಯ ಅಧಿಕಾರಿ ಡಾ. ಅಬ್ದುಲ್ ಖಾದರ್, ನಾಗರಾಜ್, ದಾದಾಪೀರ್, ಅಂಗನವಾಡಿ ಶಿಕ್ಷಕಿ ಲಲಿತಾ ಇತರರು ಹಾಜರಿದ್ದರು.