ರಾಣೇಬೆನ್ನೂರು : ದಲಿತ ಸಂಘರ್ಷ ಸಮಿತಿಯಿಂದ ವಿಜಯೋತ್ಸವ

ರಾಣೇಬೆನ್ನೂರು : ದಲಿತ ಸಂಘರ್ಷ ಸಮಿತಿಯಿಂದ ವಿಜಯೋತ್ಸವ

ರಾಣೇಬೆನ್ನೂರು, ಆ. 4 – ಒಳ ಮೀ ಸಲಾತಿ ವರ್ಗೀಕರಣದ ಪರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸ್ವಾಗತಿಸಿ ತಾಲ್ಲೂಕು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಶನಿವಾರ ನಗರದ ಸಂಗಮ ಸರ್ಕಲ್‍ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಈ ಸಮಯದಲ್ಲಿ ತಾ.ಪಂ. ಮಾಜಿ ಅಧ್ಯಕ್ಷ ನೀಲಕಂಠಪ್ಪ ಕುಸಗೂರು ಮಾತನಾಡಿ, ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಲ್ಲಿ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹಂಚಿಕೆ ಮಾಡಬೇಕೆಂಬ ನಿಟ್ಟಿನಲ್ಲಿ ಸುಮಾರು ಐದು ದಶಕಗಳ ಹಿಂದಿನಿಂದಲೂ ಹೋರಾಟ ನಡೆಸುತ್ತಿದ್ದರೂ, ಈಗ ಸುಪ್ರೀಂಕೋರ್ಟ್ ತೀರ್ಪು ಮಾದಿಗ ಮತ್ತು ಒಳ ಮೀಸಲಾತಿ ಪರ ಹೋರಾಟಕ್ಕೆ ಸಂದ ಜಯ ಎಂದರು.

ಮಲ್ಲೇಶಪ್ಪ ಮೆಣಸಿನಹಾಳ, ಮೈಲಪ್ಪ ದಾಸಪ್ಪನವರ, ಪ್ರವೀಣ ಅಸುಂಡಿ, ಉಮೇಶ ಹಿರೇಬಿದರಿ, ಗಣೇಶ ಗೋಣಿಬಸಮ್ಮನವರ, ಸಚಿನ್ ಮೆಣಸಿನಹಾಳ,  ರಮೇಶ ದಾಸಪ್ಪನವರ, ರಘು ಆಡೂರ, ನವೀನ, ರಮೇಶ ಅರಣಿ ಸೇರಿದಂತೆ ನೂರಾರು ದಲಿತ ಮುಖಂಡರು ಇದ್ದರು.

error: Content is protected !!