ಸೇಂಟ್ ಜಾನ್ಸ್ ವಿದ್ಯಾ ಸಂಸ್ಥೆಯಲ್ಲಿ ‘ಮಿಷನ್ ವಾತ್ಸಲ್ಯ’ ಕಾರ್ಯಕ್ರಮ

ಸೇಂಟ್ ಜಾನ್ಸ್ ವಿದ್ಯಾ ಸಂಸ್ಥೆಯಲ್ಲಿ  ‘ಮಿಷನ್ ವಾತ್ಸಲ್ಯ’ ಕಾರ್ಯಕ್ರಮ

ದಾವಣಗೆರೆ, ಆ. 5- ನಗರದ ಸೇಂಟ್‌ಜಾನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ‘ಮಿಷನ್ ವಾತ್ಸಲ್ಯ’ ಎಂಬ ಕಾರ್ಯಕ್ರಮದಡಿ ವಿದ್ಯಾರ್ಥಿನಿಯರಿಗಾಗಿ ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಶ್ರೀಮತಿ ಟಿ.ಎನ್. ಕವಿತಾ ಮಾತನಾಡಿ, ಮಕ್ಕಳ ಸಹಾಯವಾಣಿಯ ಉಪಯೋಗ, ಮಕ್ಕಳು ಬಾಲ್ಯಾವಸ್ಥೆಯಿಂದ ಪ್ರೌಢಾವಸ್ಥೆಗೆ ಬದಲಾಗುವಾಗ ದೈಹಿಕ ಮತ್ತು ಮಾನಸಿಕ ಬದಲಾವಣೆಗಳು  ಮುಂತಾದವುಗಳ ಬಗ್ಗೆ ಸಲಹೆ ನೀಡಿದರು. ಜಿಲ್ಲಾ ಮಕ್ಕಳ ಸಹಾಯವಾಣಿ ಸಂಯೋಜನಾಧಿಕಾರಿ ಟಿ. ನಾಗರಾಜ್ ಮಾತನಾಡಿ, ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಗಳ ಬಗ್ಗೆ ವಿವರವಾಗಿ ತಿಳಿಸಿದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಾಂಸ್ಥಿಕೇತರ ವಿಭಾಗದ ಎನ್. ಚಂದ್ರಶೇಖರ್,   ವಿದ್ಯಾಸಂಸ್ಥೆಯ ಅಧ್ಯಕ್ಷ ಹೆಚ್.ಅನಿಲ್‌ಕುಮಾರ್‌, ಕಾರ್ಯದರ್ಶಿ ಟಿ.ಎಂ. ಉಮಾಪತಯ್ಯ, ಖಜಾಂಚಿ ಪ್ರವೀಣ್ ಹುಲ್ಲುಮನೆ,  ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ  ಸೈಯ್ಯದ್ ಆರಿಫ್ ಆರ್. ಮತ್ತು ಶ್ರೀಮತಿ ಪ್ರೀತಾ.ಟಿ.ರೈ ಹಾಗೂ ಉಪಪ್ರಾಂಶುಪಾ ಲರಾದ ಶ್ರೀಮತಿ ನೇತ್ರಾವತಿ ಎಸ್.ಎಂ ಹಾಗೂ ಇತರರು ಉಪಸ್ಥಿತರಿದ್ದರು.

error: Content is protected !!