ರಾಣೇಬೆನ್ನೂರು, ಆ.5- ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಜೆಡಿಎಸ್ ಹಾಗೂ ಬಿಜೆಪಿ ಪ್ರಯತ್ನ ನಡೆಸಿವೆ ಎಂದು ಆರೋಪಿಸಿ ಹಾವೇರಿಯಲ್ಲಿಂದು ಜಿಲ್ಲಾ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿತು. ಅಲ್ಲದೇ ರಾಜ್ಯಪಾಲರ ನಡೆಯ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಶಾಸಕ ಪ್ರಕಾಶ ಕೋಳಿವಾಡ, ಉಜನೇಶ ಬಣಕಾರ, ಬಸವರಾಜ ಶಿವಣ್ಣನವರ, ಮುಖಂಡರಾದ ಸಂಜೀವ ನೀರಲಗಿ, ಎಸ್.ಎಫ್.ಎನ್ ಗಾಜಿಗೌಡ್ರ, ಮಂಜನಗೌಡ ಪಾಟೀಲ, ಆರ್. ಶಂಕರ್, ಪ್ರೇಮಾ ಪಾಟೀಲ, ಅಜ್ಜಂಪೀರ್ ಖಾದ್ರಿ, ಶೇರು ಕಾಬೂಲಿ ಮತ್ತಿತರರಿದ್ದರು.