ರಾಜ್ಯ ಹೆದ್ದಾರಿ ಸೇತುವೆ ನಿರ್ಮಾಣಕ್ಕೆ 12 ಕೋಟಿ ರೂ. ಪ್ರಸ್ತಾವನೆ

ರಾಜ್ಯ ಹೆದ್ದಾರಿ ಸೇತುವೆ ನಿರ್ಮಾಣಕ್ಕೆ 12 ಕೋಟಿ ರೂ. ಪ್ರಸ್ತಾವನೆ

ಜಗಳೂರಿನ ಶಾಸಕ ಬಿ. ದೇವೇಂದ್ರಪ್ಪ 

ಜಗಳೂರು, ಆ. 5-  ಶಿಥಿಲಗೊಂಡಿರುವ ಮಲ್ಪೆ-ಮೊಳಕಾಲ್ಮೂರು ರಾಜ್ಯ ಹೆದ್ದಾರಿಯ ಬಿಳಿಚೋಡು ಸೇತುವೆ ನಿರ್ಮಾಣಕ್ಕೆ 12 ಕೋಟಿ ರೂ.ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.

ತಾಲ್ಲೂಕಿನ ಬಿಳಿಚೋಡು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ `ನಾಡಕಚೇರಿ’  ಕಟ್ಟಡ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಅಧಿವೇಶನದ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳೆ ಅವರು ನನ್ನ ಮನವಿಗೆ ಸ್ಪಂದಿಸಿ  ಮುಂದಿನ 50 ವರ್ಷ ಭವಿಷ್ಯಕ್ಕೆ ಅನುಕೂಲವಾಗುವಂತೆ 8 ಕೋಟಿಯಿಂದ 12ಕೋಟಿ ಅನುದಾನಕ್ಕೆ ಹೆಚ್ಚಿಸುವ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ದಶಕಗಳಿಂದ ಕಿಷ್ಕಿಂಧೆ ಕೊಠಡಿಗಳಲ್ಲಿ ನಾಡಕಚೇರಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದ ಹಳೇಕಟ್ಟಡ ತೆರವುಗೊಳಿಸಿ‌ 18 ಲಕ್ಷ ರೂ.ವೆಚ್ಚದ ನೂತನ ಕಟ್ಟಡ ನಿರ್ಮಾಣಗೊಂಡಿದೆ. ಸಾರ್ವಜನಿಕರಿಗೆ ರೈತರಿಗೆ ಅನುಕೂಲವಾಗಲಿದೆ ಎಂದರು.

ಸಾರ್ವಜನಿಕರನ್ನು ಅನಗತ್ಯವಾಗಿ ಕಚೇರಿಗೆ ಅಲೆದಾಡಿಸದೆ. ಸಕಾಲದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮನ್ವಯದಿಂದ ಜನರಿಗೆ ಸ್ಪಂದಿಸಿ   ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ರಾಜಕೀಯ ಮುತ್ಸದ್ಧಿಯನ್ನು ರಾಜ್ಯಕ್ಕೆ ಕೊಡುಗೆಯಾಗಿ ನೀಡಿದ ಹಾಗೂ ಎಲ್ಲಾ ವರ್ಗದವರು ಸಾಮರಸ್ಯದಿಂದ ಜೀವನ ಸಾಗಿಸುತ್ತಿರುವ ಬಿಳಿಚೋಡು ಗ್ರಾಮದಲ್ಲಿ ಶ್ರಾವಣ ಮಾಸದ ಮೊದಲನೇ ವಾರದಂದು ಅಭಿವೃದ್ದಿ ಕೆಲಸಗಳಿಗೆ ಚಾಲನೆ ನೀಡಿರುವುದು ಸಂತಸದ ಸಂಗತಿ ಎಂದು ಶಾಸಕರು ತಿಳಿಸಿದರು.

ಒಂದು ಕೋಟಿ ರೂ. ವೆಚ್ಚದ ವಾಲ್ಮೀಕಿ ಭವನ ನಿರ್ಮಾಣಕ್ಕೆ ಗುದ್ದಲಿಪೂಜೆ : 

ಗ್ರಾಮದಲ್ಲಿ ಒಂದು ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸುವ ಶ್ರೀ ವಾಲ್ಮೀಕಿ ಸಮುದಾಯ ಭವನದ ಗುದ್ದಲಿ ಪೂಜೆಯನ್ನು ಶಾಸಕರು ಇದೇ ಸಂದರ್ಭದಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ತಹಶೀಲ್ದಾರ್ ಸೈಯ್ಯದ್ ಕಲೀಂ ಉಲ್ಲಾ, ಉಪ ತಹಶೀಲ್ದಾರ್ ರೂಪ, ಗ್ರಾ.ಪಂ. ಅಧ್ಯಕ್ಷೆ ಚಂದ್ರಮ್ಮ, ಸದಸ್ಯ ಆಜಾಮುಲ್ಲಾ, ಮುಖಂಡರಾದ ಬಿ.ಮಹೇಶ್ವರಪ್ಪ, ಪಲ್ಲಾಗಟ್ಟೆ ಶೇಖರಪ್ಪ, ಪ್ರಕಾಶ್,
 ಎಂ.ಎಸ್.ಪಾಟೀಲ್, ಓಮಣ್ಣ, ಪಿಡಿಓ ನಂದಿಲಿಂಗೇಶ್ವರ್, ಹರೀಶ್, ಜಯದೇವನಾಯ್ಕ, ರಾಜಸ್ವ ನಿರೀಕ್ಷಕರಾದ   ಧನಂಜಯ್,  ಕೀರ್ತಿ ಕುಮಾರ್ ಮುಂತಾದವರು ಇದ್ದರು.

error: Content is protected !!