ನಗರದಲ್ಲಿ ಇಂದು ಸನ್ಮಾನ ಸಮಾರಂಭ

ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘ, ಆದಿ ಕರ್ನಾಟಕ ವಿದ್ಯಾರ್ಥಿ ನಿಲಯ ಹಾಗೂ ಡಾ. ಬಿಎಂಟಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ನಗರದ ಪಿ.ಜೆ. ಬಡಾವಣೆ ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘದಲ್ಲಿ ಇಂದು ಸನ್ಮಾನ ಸಮಾರಂಭ ನಡೆಯಲಿದೆ.

ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ದೂಡಾ ನೂತನ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹಾಗೂ ಸದಸ್ಯರಿಗೆ, ಪಾಲಿಕೆ ನೂತನ ನಾಮ ನಿರ್ದೇಶಿತ  ಸದಸ್ಯರಾದ ಎಲ್. ಹೆಚ್ ಸಾಗರ್, ಕಾಂಗ್ರೆಸ್ ಮುಖಂಡ ಭಾಸ್ಕರ್ ರೆಡ್ಡಿ, ಪಾಲಿಕೆ ಆಶ್ರಯ ಸಮಿತಿ ಸದಸ್ಯ ಕಣ್ಣಾಳ ಅಂಜಿನಪ್ಪ ಹಾಗೂ ಚಿತ್ರದುರ್ಗದಲ್ಲಿ ಲಿಪಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಸ್. ರಾಜಣ್ಣ ಅವರುಗಳನ್ನು ಸನ್ಮಾನಿಸಲಾಗುವುದು. ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್ ಮಲ್ಲಿಕಾರ್ಜುನ್, ಶಾಸಕ ಕೆ. ಎಸ್. ಬಸವಂತಪ್ಪ, ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಪಾಲಿಕೆ ಆಯುಕ್ತರಾದ ರೇಣುಕಾ, ಪಾಲಿಕೆ ವಿಪಕ್ಷ ನಾಯಕ ಕೆ. ಪ್ರಸನ್ನಕುಮಾರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

error: Content is protected !!