ವೃತ್ತಿ ರಂಗಾಯಣದ ನಿರ್ದೇಶಕರಾಗಿ ಕಡಕೋಳ

ವೃತ್ತಿ ರಂಗಾಯಣದ ನಿರ್ದೇಶಕರಾಗಿ ಕಡಕೋಳ

ಬೆಂಗಳೂರು, ಆ. 12 – ದಾವಣಗೆರೆ ವೃತ್ತಿ ರಂಗಾಯ ಣದ ನಿರ್ದೇಶಕರನ್ನಾಗಿ  ಹಿರಿಯ ಸಾಹಿತಿ ಮಲ್ಲಿಕಾರ್ಜುನ ಕಡಕೋಳ ಅವರನ್ನು ನೇಮಕ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ. 

ಕಳೆದ ಎರಡು ವರ್ಷ ಕಾಲ ಖಾಲಿ ಇದ್ದ ಈ ಹುದ್ದೆಗೆ ನಿರ್ದೇಶಕರಾಗಿ ಕಡಕೋಳ ಅವರು ಮೂರು ವರ್ಷದ ಅವಧಿಗೆ ನೇಮಕವಾಗಿದ್ದಾರೆ. 

ಈ ಹಿಂದೆ ಕರ್ನಾಟಕ ನಾಟಕ ಅಕಾಡೆಮಿ ಮತ್ತು ರಂಗ ಸಮಾಜದ ಸದಸ್ಯರಾಗಿ ಬಾ ಅತಿಥಿ, ರಂಗ ಸಮಾಗಮ, ತಿಂಗಳ ಬೆಳಕಲಿ, ರಂಗದ ಮೆರಗು ಮೊದಲಾದ ಕಾರ್ಯಕ್ರಮಗಳ ಮೂಲಕ ಕಡಕೋಳ ಅವರು ರಂಗಾಸಕ್ತರು ಮತ್ತು ಸರ್ಕಾರದ ಗಮನ ಸೆಳೆದಿದ್ದರು. ದಾವಣಗೆರೆ ವೃತ್ತಿ ರಂಗಾಯಣ ಸ್ಥಾಪನೆಯಲ್ಲೂ ಅವರ ಪರಿಶ್ರಮ ಗಮನಾರ್ಹ. `ವೃತ್ತಿ ರಂಗಭೂಮಿ : ವರ್ತಮಾನದ ಸವಾಲುಗಳು’ ವಿಷಯದ ಮೇಲೆ ಫೆಲೋಶಿಪ್ ಮಾಡಿದ್ದಾರೆ.

error: Content is protected !!