ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ

ದಾವಣಗೆರೆ, ಆ. 19 – ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಪಡೆಯಲು ಪೆೋಸ್ಟ್-ಮೆಟ್ರಿಕ್ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಹೆಚ್ಚಿನ ವಿಕಲಚೇತನ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾರ್ಥಿ ವೇತನ ಪಡೆಯುವುದಕ್ಕಾಗಿ ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ:  https://ssp.postmatric.karnataka.gov.in/ ನಲ್ಲಿ ನೋಂದಣಿ ಮಾಡಿ ಕೊಂಡು ಅರ್ಜಿಯನ್ನು ಸಲ್ಲಿಸ ಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ವಿವಿಧೋದ್ಧೇಶ ಪುನರ್ವಸತಿ ಕಾರ್ಯ ಕರ್ತರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

error: Content is protected !!