ಜಿಲ್ಲಾಡಳಿತದಿಂದ ಹಿಂದುಳಿದ ವರ್ಗಗಳ ನಾಯಕ, ಸಾಮಾಜಿಕ ಹರಿಕಾರ ಡಿ. ದೇವರಾಜ ಅರಸುರವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 10.30ಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳು : ಡಾ. ಪ್ರಭಾ ಮಲ್ಲಿಕಾರ್ಜುನ್, ಕೆ.ಎಸ್. ಬಸವಂತಪ್ಪ, ವಿನಾಯಕ ಬಿ.ಹೆಚ್, ಕೆ. ಅಬ್ದುಲ್ ಜಬ್ಬಾರ್, ಕೆ. ದಿನೇಶ್ ಶೆಟ್ಟಿ, ಜಿ.ಎಂ. ಗಂಗಾಧರಸ್ವಾಮಿ, ಉಮಾ ಪ್ರಶಾಂತ್, ಸುರೇಶ್ ಬಿ. ಇಟ್ನಾಳ್ ಮತ್ತು ಇತರರು.