ಹರಿಹರದಲ್ಲಿ ಇಂದು ರಾಘವೇಂದ್ರ ಸ್ವಾಮಿ ಮಹಾರಥೋತ್ಸವ

ಹರಿಹರದಲ್ಲಿ ಇಂದು ರಾಘವೇಂದ್ರ ಸ್ವಾಮಿ ಮಹಾರಥೋತ್ಸವ

ಶ್ರೀ ರಾಘವೇಂದ್ರ ಸ್ವಾಮಿ ದೇವಸ್ಥಾನದಲ್ಲಿ  ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಇಂದು ನಡೆಯಲಿದೆ.

ಬೆಳಗ್ಗೆ 9.30ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12ಕ್ಕೆ ಮಹಾರಥೋತ್ಸವ, ಮಧ್ಯಾಹ್ನ 1 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಜರುಗುವುದು.

ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಭಜನೆ ರಾತ್ರಿ 8.30ಕ್ಕೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಎ.ಬಿ. ಬಸವರಾಜ್, ಕಾರ್ಯದರ್ಶಿ ಸುಕುಮಾರ್, ಖಜಾಂಚಿ ಎಸ್. ರಂಗನಾಥ್ ತಿಳಿಸಿದ್ದಾರೆ.

error: Content is protected !!