ದಾವಣಗೆರೆ, ಆ.21- ವಚನ, ಕಾಯಕ ನಿಷ್ಠೆಯ ಮೂಲಕ ಸಮಾಜ ಸುಧಾರಣೆಗೆ ನುಲಿಯ ಚಂದಯ್ಯ ಅತ್ಯುನ್ನತ ಕೊಡುಗೆ ನೀಡಿದ್ದಾರೆ ಎಂದು ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕೊರಚ, ಕೊರಮ ಸಮಾಜ, ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ನುಲಿಯ ಚಂದಯ್ಯ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಗೌರವ ಸಲ್ಲಿಸಿ ಇವರಪ ಮಾತನಾಡಿದರು.
ಬಸವಣ್ಣನ ಕಾರ್ಯಕ್ಷೇತ್ರ ಕಲ್ಯಾಣಕ್ಕೆ ಬಂದು ಕಲ್ಯಾಣದ ಕೆರೆಗಳಲ್ಲಿ ಸಿಗುವ ಹೊಡಕೆ, ಚೇಣಿ ಮುಂತಾದ ನಾರುಗಳಿಂದ ಹಗ್ಗ ಹೊಸೆದು ಮಾರಾಟ ಮಾಡಿ ಬಂದ ಹಣದಿಂದ ಜಂಗಮ ದಾಸೋಹ ನಡೆಸುತ್ತಿದ್ದರು ಎಂದು ತಿಳಿಸಿದರು.
ನುಲಿಯ ಕಾಯಕದಿಂದಾಗಿ ಮುಂದೆ ನುಲಿಯ ಚಂದಯ್ಯನೆಂದು ಹೆಸರಾದವರು ಹಗ್ಗ ಮಾರುವ ಕಾಯಕವನ್ನು ಅತ್ಯಂತ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಮಾಡುತ್ತಾ ಬಸವಣ್ಣ ನವರಿಗೆ ಪ್ರಿಯರಾದರು ಎಂದು ತಿಳಿಸಿದರು.
ಮಲೇಬೆನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಮಂಜುನಾಥ್ ಕೆ.ಜಿ. ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ನುಲಿಯ ಚಂದಯ್ಯ ಸಮಾಜದ ಜಿಲ್ಲಾಧ್ಯಕ್ಷ ಮಂಜುನಾಥ, ಜನಕ್ರಾಂತಿ ಸಂಪಾದಕ ಕೆ.ಆರ್. ಗಂಗರಾಜು, ಆನಂದಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಹಾಗೂ ಇತರರು ಉಪಸ್ಥಿತರಿದ್ದರು.